ಹಾವು ಕಚ್ಚಿ ಮಹಿಳೆ ಸಾವು

0
10

ದಾವಣಗೆರೆ:

        ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೇಕಲ್ಲು ಗ್ರಾಮದಲ್ಲಿ ಭಾನುವಾರ ಜರುಗಿದೆ.ಗ್ರಾಮದ ಕೆಂಚಮ್ಮ ಕೋಂ ಮಂಜಪ್ಪ ಮೃತ ಮಹಿಳೆಯಾಗಿದ್ದಾರೆ. ಕೆಂಚಮ್ಮ ಎಂದಿನಂತೆ ಭಾನುವಾರವು ಸಹ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಹಾವು ಕಚ್ಚಿತ್ತು. ವಿಷಯ ತಿಳಿದ ಸಂಬಂಧಿಕರು ಕೆಂಚಮ್ಮನನ್ನು ಚಿಕಿತ್ಸೆಗೆಂದು ದಾವಣಗೆರೆಯ ಜಿಲ್ಲಾ ಚಿಗಟೇರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ.ಈ ಕುರಿತು ಬಿಳಿಚೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here