ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತೆರೆಯಲು ಸರ್ಕಾರ ಬದ್ಧ:ಸಿಎಂ

0
17

ಬೆಂಗಳೂರು

       ರಾಜ್ಯದಲ್ಲಿರುವ ನಾಲ್ಕು ಪ್ರಾದೇಶಿಕ ವಿಭಾಗಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿಂದು ನಡೆದ ಟ್ರೂಮ 2018 ವೈದ್ಯರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕುಗ್ರಾಮ ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿ ಮಾಧ್ಯಮಿಕ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗುವುದು ಎಂದು ತಿಳಿಸಿದರು.

         ಕೇವಲ ಸರ್ಕಾರಿ ಆಸ್ಪತ್ರೆಗಳು ಮಾತ್ರ ಬಡವರ ಆರೋಗ್ಯ ಸೇವೆಯನ್ನು ಕೈಗೊಳ್ಳ ಬೇಕಾಗಿಲ್ಲ ಖಾಸಗಿ ಆಸ್ಪತ್ರೆಗಳೂ ಸಹ ಇಂತಹ ಉಚಿತ ಸೇವೆಯನ್ನು ನೀಡುವುದು ಅಗತ್ಯವಾಗಿದೆ. ಈ ಬಗ್ಗೆ ವೈದ್ಯರು ಹೆಚ್ಚಿನ ಗಮನ ಹರಿಸಬೇಕೆಂದು ಹೇಳಿದರು.

        ಎಲ್ಲರಿಗಾಗಿ ಆರೋಗ್ಯ ಎಂಬ ಧ್ಯೇಯದಡಿ ಸರ್ಕಾರ ಅಗತ್ಯ ವೈದ್ಯಕೀಯ ಸೇವೆಯನ್ನು ರಾಜ್ಯದ ಜನರಿಗೆ ಒದಗಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ 10 ಕ್ಕೂ ಹೆಚ್ಚು ಅಪಘಾತ ಆರೈಕೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here