ಸಾಧಕರಿಗೆ ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಗೌರವ ಸಮರ್ಪಣೆ

0
27

ಶಿಗ್ಗಾವಿ:

     ಸಮಾಜ ಮುಖಿ ಕಾರ್ಯದಲ್ಲಿ ನಿರತರಾದ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸಿದಾಗ ಮಾತ್ರ ನಾಡಿನ ಏಳಿಗೆ ಸಾಧ್ಯವಿದೆ. ಅಂತಹ ಮಹತ್ವದ ಕಾರ್ಯ ನಮ್ಮೆಲ್ಲರದಾಗಬೇಕು ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.

      ಪಟ್ಟಣದ ಸಂಗನಬಸವ ಮಂಗಲಭವನದಲ್ಲಿ ಗಂಗಮ್ಮ ಬೊಮ್ಮಾಯಿ ಟ್ರಸ್ಟ್ ವತಿಯಿಂದ ಗುರುವಾರ ಸಂಜೆ ನಡೆದ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳಿಗೆ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸಿ ನಿರಾಶೆಯಾದ ಸಾಧಕರನ್ನು ಗುರುತಿಸಿ ರಾಜ್ಯ ಮಟ್ಟದ ಮಾದರಿಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

       ಅದರಿಂದ ಅವರಲ್ಲಿ ಇನ್ನಷ್ಟು ಕೆಲಸ ಕಾರ್ಯ ಮಾಡುವ ಹುಮ್ಮಸ್ಸು ಮೂಡಿಸಲಾಗುತ್ತಿದೆ. ಉತ್ತಮ ವ್ಯಕ್ತಿ, ಸಂಘ, ಸಂಸ್ಥೆಗಳಲ್ಲಿ ನಿರತವಾಗಿ ಕೆಲಸ ಮಾಡುವ ಮೂಲಕ ಎಲೆಮರೆ ಕಾಯಿಯಂತೆ ಸೇವೆ ಸಲ್ಲಿಸುವ ವ್ಯಕ್ತಿಗಳಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಕಳೆದ ಆರು ವರ್ಷಗಳಿಂದ ಮಾಡಲಾಗುತ್ತಿದೆ. ಇದರಿಂದ ಉತ್ತಮ ವಾತಾವರಣ ಸೃಷ್ಟಿಸುವ ಉದ್ದೇಶ ಟ್ರಸ್ಟ್‍ದಾಗಿದೆ ಎಂದರು.

        ಹಾನಗಲ್ ತಾಲೂಕಾ ಶಾಸಕ ಸಿ.ಎಂ.ಉದಾಸಿ ಮಾತನಾಡಿ, ಸಾಧಕರನ್ನು ಗುರುತಿಸಿ ಪ್ರತಿವರ್ಷ ಗೌರವ ಪ್ರಶಸ್ತಿ ಪ್ರದಾನ ಮಾಡುವ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು, ಜನರ ಭಾವನೆಗಳನ್ನು ಸ್ಪಂದಿಸಿ ಕಾರ್ಯ ನಿರ್ವಹಣೆ ಮಾಡುವುದು ಜನಪ್ರತಿನಿದಿಗಳ ಮೂಡಬೇಕು. ಅದರಿಂದ ಜನರ ಪ್ರೀತಿವಿಶ್ವಾಸ ಗಳಿಸಲು ಸಾಧ್ಯವಿದೆ. ದೇಶಕ್ಕೆ ಮಾದರಿಯಾದ ಏತ ನೀರಾವರಿ ಯೋಜನೆ ಜಾರಿಗೆ ತರುವುದರ ಮೂಲಕ ಬೊಮ್ಮಾಯಿ ಅವರು ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದರು.

       ಹಿರೇಕೆರೂರ ಮಾಜಿ ಶಾಸಕ ಯು.ಬಿ.ಬಣಕಾರ ಮಾತನಾಡಿ, ತಾಯಿ ಋಣ ತೀರಿಸಲು ಸಾಧ್ಯವಿಲ್ಲ. ಆದರೆ ಬೊಮ್ಮಾಯಿ ಅವರು ತಾಯಿಯ ಸ್ಮರಣೆಗಾಗಿ ಶ್ರಮಿಕರಿಗೆ ಗೌರವ ಸಲ್ಲಿಸುವ ಈ ಕಾರ್ಯ ಸಮಾಜ ಮುಖಿಯಾಗಿದೆ ಎಂದರು.

       ವಿರಕ್ತಮಠದ ಸಂಗನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಲಿಂಗರಾಜ ಜಪ್ಪರಗಳ್ಳಿ, ಭರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಮಾತನಾಡಿದರು.

       ಕೆಸಿಸಿ ಬ್ಯಾಂಕ್ ನಿರ್ದೇಶಕ ಗಂಗಣ್ಣ ಸಾತಣ್ಣವರ, ಜಿಲ್ಲಾ ಪಂಚಾಯ್ತಿ ಸದಸ್ಯೆ ಶೋಭಾ ಗಂಜೀಗಟ್ಟಿ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪಾರವ್ವ ಆರೇರ್, ಉಪಾಧ್ಯಕ್ಷೆ ಪದ್ಮಾವತಿ ಪಾಟೀಲ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಸಜ್ಜನ, ಶಂಕರಗೌಡ್ರ ಪಾಟೀಲ, ಎಸ್. ವೈ. ಪಾಟೀಲ, ಬಸವರಾಜ ಅರಬಗೊಂಡ, ಧಾರವಾಡ ಕೆಎಂಎಫ್ ಅಧ್ಯಕ್ಷ ಶಂಕರ ಮುದೋಳ ಮತ್ತಿತರರು ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

LEAVE A REPLY

Please enter your comment!
Please enter your name here