ಹೊನ್ನಾಳಿ:
ಇಲ್ಲಿನ ಹಿರೇಕಲ್ಮಠದ ಸಮೀಪದಲ್ಲಿರುವ ಐಟಿಐ ಕಾಲೇಜು ಹಿಂಭಾಗದಲ್ಲಿನ ಗೋದಾಮಿನ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಭಾನುವಾರ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 115 ಕ್ವಿಂಟಾಲ್ಗಳಷ್ಟು ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.50 ಕೆಜಿ ತೂಕದ 230 ಚೀಲ ಅಕ್ಕಿಯನ್ನು ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು. ಅದರ ಮೌಲ್ಯ 2 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಅಕ್ಕಿಯನ್ನು ಸಂಗ್ರಹಿಸಿರುವುದು ಯಾರು ಎಂಬುದು ಪತ್ತೆಯಾಗಿಲ್ಲ. ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ ಎಂದು ತಹಸೀಲ್ದಾರ್ ಎಂ. ಮಲ್ಲಿಕಾರ್ಜುನ್ “ವಿಕ” ಪತ್ರಿಕೆಗೆ ಮಾಹಿತಿ ನೀಡಿದ್ದಾರೆ.
ಇಲ್ಲಿನ ಎಪಿಎಂಸಿಯಲ್ಲಿನ ಆಹಾರ ನಿಗಮದ ಸಗಟು ಮಳಿಗೆಯ ವಶಕ್ಕೆ ಅಕ್ಕಿಯನ್ನು ನೀಡಲಾಗಿದೆ ಎಂದು ಆಹಾರ ಇಲಾಖೆಯ ನಾಗರಾಜ್, ಶಿವಾಜಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ