ಪ್ರಧಾನ ಮಂತ್ರಿ ನರೇಂದ್ರಮೋದಿಯವರಿಂದ ಮಾತ್ರ ರಾಷ್ಟ್ರದ ಸಂರಕ್ಷಣೆ ಸಾಧ್ಯ.

ಚಳ್ಳಕೆರೆ

       ರಾಷ್ಟ್ರದ ಇತಿಹಾಸದಲ್ಲಿ ಕೇವಲ ಐದು ವರ್ಷಗಳ ಅವಧಿಯಲ್ಲೇ ವಿಶ್ವಮನ್ನಣೆ ಪಡೆದ ಕೆಲವೇ ಕೆಲವು ಆಗ್ರಮಾನ್ಯ ನಾಯಕರಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿ ಮೊದಲಿಗರು ಎಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಶ್ರೀನಿವಾಸ್ ತಿಳಿಸಿದರು. ಅವರು, ಸೋಮವಾರ ಪಕ್ಷದ ಕಾರ್ಯಾಲಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖಂಡರೊಂದಿಗೆ ಚುನಾವಣೆಯ ಪೂರ್ವ ಸಿದ್ದತೆಯ ಬಗ್ಗೆ ಚಿಂತನೆ ನಡೆಸಿದರು. ಈಗಾಗಲೇ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ರಾಜ್ಯ ಪರಿಶಿಷ್ಟ ವರ್ಗದ ಹಿರಿಯ ನಾಯಕ, ಮಾಜಿ ಸಚಿವ ಎ.ನಾರಾಯಣಸ್ವಾಮಿಯವರನ್ನು ಪಕ್ಷ ಆಯ್ಕೆ ಮಾಡಿದ್ದು, ಮಾರ್ಚ್ 26ರ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದು, ಈ ಸಂದರ್ಭದಲ್ಲಿ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು ತಪ್ಪದೆ ಹಾಜರಿರಬೇಕೆಂದು ಮನವಿ ಮಾಡಿದರು.

       ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿಯ ಯುವ ಮುಖಂಡ ಎಂ.ಎಸ್.ಜಯರಾಮ್ ಮಾತನಾಡಿ, ಲೋಕಸಭೆ ಚುನಾವಣೆಗೆ ಕೇವಲ ಕೆಲವೇ ದಿನಗಳು ಬಾಕಿ ಇದ್ದು, ಪಕ್ಷದ ಕಾರ್ಯಕರ್ತರು ಶತಾಯಗತಾಯ ಅಭ್ಯರ್ಥಿ ಎ.ನಾರಾಯಣಸ್ವಾಮಿಯವರ ಗೆಲುವಿಗೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಬೇಕಿದೆ.

          ಪ್ರಸ್ತುತ ಸನ್ನಿವೇಶದಲ್ಲಿ ಬಹುಸಂಖ್ಯಾತ ಭಾರತ ರಾಷ್ಟ್ರವನ್ನು ಕಾಪಾಡಬಲ್ಲ ಸಾಮಥ್ರ್ಯವಿರುವುದು ಪ್ರಧಾನ ಮಂತ್ರಿ ನರೇಂದ್ರಮೋದಿಯವರಲ್ಲಿ ಮಾತ್ರ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಉಳಿದ ಅವಧಿಯಲ್ಲಿ ಹಗಲು ರಾತ್ರಿ ಎನ್ನದೆ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮತದಾರರ ವಿಶ್ವಾಸವನ್ನು ಗಳಿಸಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕೆಂದರು.

         ಮಂಡಲಾಧ್ಯಕ್ಷ ಬಿ.ವಿ.ಸಿರಿಯಣ್ಣ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಪ್ರತಿನಿತ್ಯ ಭೇಟಿ ನೀಡಿ, ಪಕ್ಷದ ಪರವಾಗಿ ಮತಯಾಚನೆ ಮಾಡಲಾಗುತ್ತಿದೆ. ಈಗಾಗಲೇ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಬಿಜೆಪಿ ಪರವಾದ ಅಲೆ ಬಲವಾಗಿ ಬೇರೂರಿದೆ ಎಂದರು.

         ಪೂರ್ವಸಿದ್ದತಾ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಬಿ.ಎಸ್.ಶಿವಪುತ್ರಪ್ಪ, ತಾಲ್ಲೂಕು ಉಪಾಧ್ಯಕ್ಷ ಹೊಟ್ಟೆಪ್ಪನಹಳ್ಳಿ ಮಂಜುನಾಥ, ಕ್ಷೇತ್ರ ಉಸ್ತುವಾರಿ ಟಿ.ಬೋರನಾಯಕ, ರೈತ ಮೋರ್ಚಾ ಅಧ್ಯಕ್ಷ ಕೃಷ್ಣಮೂರ್ತಿ, ಎಸ್ಸಿ ಮೋರ್ಚಾ ಅಧ್ಯಕ್ಷ ಬಂಡೆರಂಗಸ್ವಾಮಿ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಕರೀಕೆರೆ ತಿಪ್ಪೇಸ್ವಾಮಿ, ಬಿ.ವಿ.ಶ್ರೀನಿವಾಸ್, ಕಾಟಪ್ಪನಹಟ್ಟಿ ವೀರೇಶ್, ಮಾರುತಿ, ಜಗದಾಂಭ, ಜಿ.ಕೆ.ವೀರಣ್ಣ, ದಿನೇಶ್‍ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap