ಲೋಕಸಭಾ ಸಾರ್ವತ್ರಿಕ ಚುನಾವಣೆ : ಜಿಲ್ಲೆಯಾದ್ಯಂತ ವಿವಿಧ ಚಟುವಟಿಕೆಗಳು ನಿಷೇಧಾಜ್ಞೆ

0
4

ಬಳ್ಳಾರಿ

      ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಮತದಾನ ದಿನವಾದ ಇದೇ ಏ.23 ರಂದು ಜಿಲ್ಲೆಯಾದ್ಯಂತ ಎಲ್ಲಾ ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಮತದಾನದ ದಿನದ 48 ಗಂಟೆ ಪೂರ್ವದಿಂದ ಅನ್ವಯಿಸುವಂತೆ ಮತದಾನ ದಿನದ ನಂತರದ 24 ಗಂಟೆಗಳ ಅವಧಿಯವರೆಗೆ ವಿವಿಧ ರಾಜಕೀಯ ಚಟುವಟಿಕೆಗಳನ್ನು ಹಾಗೂ ಈ ಅವಧಿಯಲ್ಲಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರುವುದು ಮತ್ತು ಸಂಚರಿಸುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಪಾರದರ್ಶನಕ, ಮುಕ್ತ, ನ್ಯಾಯಸಮತ್ತ ಮತ್ತು ಶಾಂತಿಯುತವಾಗಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಮತದಾನ ನಡೆಯುವ ಪ್ರಯುಕ್ತ ಈ ಅವಧಿಯಲ್ಲಿ ಜಿಲ್ಲೆಯಾದ್ಯಂತ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಪ್ರಜಾ ಪ್ರತಿನಿಧಿ ಕಾಯ್ದೆ 1951 ಕಲಂ 126ರಡಿ ವ್ಯಾಖ್ಯಾನಿಸಿದ ಅಂಶಗಳಂತೆ, ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144 ಮತ್ತು ದಂಡ ಪ್ರಕ್ರಿಯಾ ಸಂಹಿತೆ (ತಿದ್ದುಪಡಿ) 2005ರ ಸೆಕ್ಷನ್ 144 (ಎ) ಅಡಿ ದತ್ತವಾದ ಅಧಿಕಾರವನ್ನು ಚಲಾಯಿಸಿ ಏ.21ರ ಸಂಜೆ 6 ಗಂಟೆಯಿಂದ ಏ.24ರ ಸಂಜೆ 6 ಗಂಟೆಯವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿಗೊಳಿಸಲಾಗಿದೆ.

      ಈ ಅವಧಿಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿ/ಕಾರ್ಯಕರ್ತರು ಮನೆ ಮನೆಗೆ ತೆರಳಿ ಪಕ್ಷದ ಪರ ಮತಯಾಚನೆ ನಡೆಸುವುದನ್ನು ಹೊರತುಪಡಿಸಿ, ಉಳಿದಂತೆ ಯಾವುದೇ ರಾಜಕೀಯ ಸಭೆ-ಸಮಾರಂಭ ನಡೆಸುವುದು, ಪಟಾಕಿ ಸಿಡಿಸುವುದು, ಮೆರವಣಿಗೆ ಇನ್ನಿತರ ಕಾರ್ಯಕ್ರಮ ನಡೆಸುವುದು, ಛಾಯಾಗ್ರಹಣ, ದೂರದರ್ಶನ ಅಥವಾ ಇತರೆ ರೀತಿಯ ಉಪಕರಣಗಳ ಮೂಲಕ ಯಾವುದೇ ಚುನಾವಣಾ ವಿಷಯವನ್ನು ಸಾರ್ವಜನಿಕರಿಗೆ ಪ್ರದರ್ಶಿಸುವುದು ನಿಷೇಧಿಸಿದೆ. ಮಾರಕ ಆಯುಧಗಳನ್ನು ಹೊಂದಿರುವುದು ಅಥವಾ ಹಿಡಿದು ಓಡಾಡುವುದು ಸಹ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮತಗಟ್ಟೆಗಳ ಸುತ್ತಲಿನ 200 ಮೀಟರ್ ಆವರಣ ಪ್ರದೇಶ ಹಾಗೂ ಸಂತೆ /ಜಾತ್ರೆ ನಿಷೇಧ :

      ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮತಗಟ್ಟೆಗಳಲ್ಲಿ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಸ್ಥಳ ನಿರ್ಬಂಧಿತ ಪ್ರದೇಶವಾಗಿರುತ್ತದೆ. ಈ ಪ್ರದೇಶಗಳಲ್ಲಿ ಖಾಸಗಿ ವಾಹನಗಳ ನಿಲುಗಡೆ, ಧ್ವನಿ ವರ್ಧಕ ಬಳಕೆ ಮುಂತಾದವುಗಳನ್ನು ನಿಷೇಧಿಸಿದೆ ಹಾಗೂ ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ಪಕ್ಷದ ಪ್ರಚಾರ, ಮತದಾರರ ಓಲೈಕೆ ಮುಂತಾದವುಗಳನ್ನು ಮಾಡಬಾರದು.

      ಏ.23 ರಂದು ಮತದಾನದಿನವಾದ ಜಿಲ್ಲೆಯಾದ್ಯಂತ ಎಲ್ಲಾ ಸಂಜೆ/ಜಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here