ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

0
20

ಕೊರಟಗೆರೆ:-

       ತಾಲೂಕು ಆಡಳಿತ ವತಿಯಿಂದ ನ.1 ರಂದು ಬೆಳಿಗ್ಗೆ 9 ಗಂಟೆಗೆ ಪಟ್ಟಣದ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಸಂಜೆ 5-30 ಕ್ಕೆ ಪ.ಪಂ. ಕಛೇರಿ ಆವರಣದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ನಾಗರಾಜು ತಿಳಿಸಿದ್ದಾರೆ.

      ಅವರು ಅ31 ರಂದು ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಬೆಯ ನಂತರ ಪ್ರತಿಕಾ ಪ್ರಕಟಣೆ ಬಿಡುಗಡೆ ಮಾಡಿ ಮಾತನಾಡಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅಧಕ್ಷತೆಯಲ್ಲಿ ನ.10 ರಂದು ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಕನ್ನಡ ನಾಡು ನುಡಿಗೆ ಸಂಬಂದಿಸಿದಂತೆ ಕನ್ನಡ ತಾಯಿ ಭುವನೇಶ್ವರಿ ಭಾವಚಿತ ್ರದೊಂದಿಗೆ ಹಾಗೂ ದೇಶ ಭಕ್ತರ ಸ್ಥಬ್ಧ ಚಿತ್ರಗಳೊಂದಿಗೆ ಶಾಲಾ ಮಕ್ಕಳು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಕಾರ್ಯಕ್ರಮ ನಡೆಯುತ್ತದೆ ಎಂದು ತಿಳಿಸಿದರು.

      ಸರ್ಕಾರಿ ಕಿರಿಯ ಕಾಲೇಜು ಕ್ರೀಡಾಂಗಣದಲ್ಲಿ ನಡೆಯುವ ಸ್ಥಳಕ್ಕೆ ಆಗಮಿಸಿ ನಂತರ ಬೆಳಿಗ್ಗೆ 9 ಗಂಟೆಗೆ ದ್ವಜಾರೋಹಣ ನೇರವೇರಿಸಿ ಗೌರವ ರಕ್ಷೆ ಸ್ವೀಕರಿಸುವರು, ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ವೆಂಕಟರವಣಪ್ಪ, ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್, ಜಿ.ಪಂ. ಅಧ್ಯಕ್ಷೆ ಲತಾರವಿಕುಮಾರ್, ಸಂಸದ ಎಸ್.ಪಿ.ಮುದ್ದಹುಮೇಗೌಡ, ಸೇರಿದಂತೆ ಜಿಲ್ಲೆಯ ಎಲ್ಲಾ ವಿಧಾನ ಪರಿಷತ್ ಸದಸ್ಯರು, ತಾ.ಪಂ. ಅಧ್ಯಕ್ಷ ಕೆಂಪರಾಮಯ್ಯ, ಉಪಾಧ್ಯಕ್ಷೆ ನರಸಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಟಿ.ಸಿ.ರಾಮಯ್ಯ, ಜಿ.ಪಂ.ಸದಸ್ಯರು ಗಳಾದ ಪ್ರೇಮಾ, ನಾರಾಯಣಮೂರ್ತಿ, ಶಿವರಾಮಯ್ಯ, ಅಕ್ಕಮಹಾದೇವಿ, ಕಸಾಪಾ ಅಧ್ಯಕ್ಷ ಮಲ್ಲಿಕಾರ್ಜುನ್, ಎಪಿಎಂಸಿ ಅಧ್ಯಕ್ಷ ವೆಂಕಟೇಶ್‍ಮೂರ್ತಿ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.

       ಸಂಜೆ 5.30 ಕ್ಕೆ ಪಟ್ಟಣದ ಪಂಚಾಯಿತಿ ಮುಂಭಾಗದ ವೇದಿಕೆಯಲ್ಲಿ ತಾಲೂಕು ಆಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಕಲಾವಿದರಿಂದ ಶಾಲಾ ಮಕ್ಕಳ ಮತ್ತು ರಂಗಭೂವಿ ಕಲಾವಿದರ ಆಕರ್ಷಕ ಸಾಂಸ್ಕøತಿಕ ಕಾರ್ಯಕ್ರಮದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಗಣ್ಯರಿಗೆ ತಾಲೂಕು ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಿಗೆ ಸನ್ಮಾನಿಸಲಾಗುವುದು.

       ಅಯ್ಕೆ ಸಭಯಲ್ಲಿ ತಾ.ಪಂ. ಇಓ ಹಾಗೂ ಅಯ್ಕೆ ಸಮಿತಿ ಅಧ್ಯಕ್ಷ ಶಿವಪ್ರಕಾಶ್, ಪ.ಪಂ. ಸದಸ್ಯ ಕೆ.ಆರ್. ಓಬಳರಾಜು, ನಟರಾಜು, ನಾಟಕ ಅಕಾಡಮಿ ಸದಸ್ಯ ಮೈಲಾರಪ್ಪ, ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ್, ಮಯೂರಗೋವಿಂದರಾಜು, ಪ.ಪಂ. ಅಧಿಕಾರಿ ರೈಸ್ ಅಹಮದ್, ಪತ್ರಕರ್ತ ಎನ್.ಪದ್ಮನಾಭ್, ಚಿಕ್ಕಪ್ಪಯ್ಯ, ಕೆ.ಆರ್.ನಾಗೇಂದ್ರ, ಬಿಆರ್‍ಸಿ ಸುರೇಂದ್ರನಾಥ್, ಅಕ್ಷರ ದಾಸೋಹ ರಘು, ಹನುಮಂತರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

LEAVE A REPLY

Please enter your comment!
Please enter your name here