ಹುಳಿಯಾರಿನಲ್ಲಿ ಜ.9 ಕ್ಕೆ ಸಾರ್ವಜನಿಕ ಕುಂದುಕೊರತೆ ಸಭೆ

0
7

ಹುಳಿಯಾರು

         ಹುಳಿಯಾರು ಹೋಬಳಿ ಮಟ್ಟದ ಜನಸ್ಪಂದನ, ಪಿಂಚಣಿ ಅದಾಲತ್ ಮತ್ತು ಕಂದಾಯ ಅದಾಲತ್ ಹಾಗೂ ಸಾರ್ವಜನಿಕರ ಕುಂದುಕೊರತೆಗಳ ಸಭೆಯನ್ನು ಜ.9 ರ ಬುಧವಾರ ಬೆಳಗ್ಗೆ 10 ಗಂಟೆಗೆ ಹುಳಿಯಾರಿನ ಪರಿವೀಕ್ಷಣಾ ಮಂದಿರದ ಬಳಿ ಹಮ್ಮಿಕೊಳ್ಳಲಾಗಿದೆ.

            ಪರಿವೀಕ್ಷಣಾ ಮಂದಿರದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ಸಭೆಯು ಜಿಲ್ಲಾಧಿಕಾರಿ ಡಾ.ರಾಕೇಶ್ ಕುಮಾರ್.ಕೆ ಇವರ ಉಪಸ್ಥಿತಿಯಲ್ಲಿ ನಡೆಯಲಿದ್ದು ಸಭೆಯ ಅಧ್ಯಕ್ಷತೆಯನ್ನು ಶಾಸಕರಾದ ಜೆ.ಸಿ.ಮಾಧುಸ್ವಾಮಿ ವಹಿಸುವರು.
ಸಭೆಯಲ್ಲಿ ಉಪವಿಭಾಗಾಧಿಕಾರಿ, ತಹಸೀಲ್ದಾರ್ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

           ಸಾರ್ವಜನಿಕರು ಕುಂದುಕೊರತೆಗಳು, ಅಹವಾಲುಗಳು ಇದ್ದಲ್ಲಿ ಲಿಖಿತವಾಗಿ ಸಲ್ಲಿಸಬಹುದಾಗಿದ್ದು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹುಳಿಯಾರು ನಾಡಕಚೆರಿಯ ಪ್ರಭಾರಿ ಉಪತಹಸೀಲ್ದಾರ್ ಮಂಜುನಾಥ್ ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here