ಅಕ್ಷರ ಜಾತ್ರೆ: ನೋಂದಣಿ ಮಾಡಿಸಿಕೊಳ್ಳಲು ಪರದಾಡಿದ ಸಾಹಿತ್ಯ ಪ್ರೇಮಿಗಳು

0
24

ಧಾರವಾಡ:

      ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ರಾಜ್ಯದ ಹಲವೆಡೆಯಿಂದ ಆಗಮಿಸಿದ್ದ ಸಾಹಿತ್ಯ ಪ್ರೇಮಿಗಳು ನೋಂದಣಿ ಮಾಡಿಸಿಕೊಳ್ಳಲು ಪರದಾಡಿದ ಪ್ರಸಂಗ ಇಂದು ಇಲ್ಲಿನ ಮುಖ್ಯದ್ವಾರದ ಬಳಿ ನಡೆಯಿತು.ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಯಾ ಜಿಲ್ಲಾ, ತಾಲೂಕು ಮಟ್ಟದಲ್ಲಿನವೆಂಬರ್ 29ರೊಳಗೆ ನೋಂದಣಿ ಮಾಡಿಸಿಕೊಂಡು ಕನ್ನಡ ಸಾಹಿತ್ಯ ಪರಿಷತ್‍ನ ಕೇಂದ್ರ ಕಚೇರಿಗೆ ಪಟ್ಟಿ ಕಳುಹಿಸಿಕೊಡಬೇಕಿತ್ತು . ಅಂತಹವರಿಗೆ ಊಟ, ವಸತಿ ವ್ಯವಸ್ಥೆಯನ್ನು ಕಸಾಪ ಮಾಡಿತ್ತು. ಆದರೆ, ಹೆಸರು ನೋಂದಾಯಿಸಿಕೊಳ್ಳದಿದ್ದ ತುಮಕೂರು  , ಕೋಲಾರ, ಚಿಕ್ಕಬಳ್ಳಾಪುರ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳ ಹಲವು ಸಾಹಿತ್ಯಾಸಕ್ತರು ಇಂದು ಪ್ರತಿಭಟನೆ ನಡೆಸಿದರು.

     ಇದರಿಂದ ಸ್ವಲ್ಪ ಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಯಿತು.ತಕ್ಷಣ ಸಂಘಟಕರು ಮಧ್ಯ ಪ್ರವೇಶಿಸಿ, ಈಗಾಗಲೇ 15 ಸಾವಿರ ಜನರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನೂ ಹೆಚ್ಚುವರಿಯಾಗಿ 2000 ಜನರಿಗೆ ವಸತಿ, ಊಟದ ವ್ಯವಸ್ಥೆ ಮಾಡಲಾಗಿದೆ. ಮತ್ತೆ ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಅಂತಿಮವಾಗಿ ಮಾತುಕತೆ ನಡೆಸಿದ ಬಳಿಕ ವಸತಿ ಸೌಲಭ್ಯ ನೀಡುವುದಿಲ್ಲ ಎಂಬ ಷರತ್ತಿನೊಂದಿಗೆ ನೋಂದಣಿ ಮಾಡಿಕೊಳ್ಳಲಾಯಿತು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here