ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ಮಹಾವೀರ ಜಯಂತೋತ್ಸವ

0
3

ಹಿರಿಯೂರು :

    ನಗರದ ತಾಲ್ಲೂಕು ಕಛೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಜೈನ ಸಮಾಜದ ಸಂಯುಕ್ತಾಶ್ರಯದಲ್ಲಿ ವೈರಾಗ್ಯಮೂರ್ತಿ ಮಹಾವೀರ ಜಯಂತೋತ್ಸವ ಕಾರ್ಯಕ್ರಮವನ್ನು ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು.

     ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರೇಡ್ 2 ತಹಶೀಲ್ದಾರ್ ಡಿ.ಮಂಜಪ್ಪ ವಹಿಸಿದ್ದರು.ವೇದಿಕೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸುಮತಿ, ಕೃಷಿ ಇಲಾಖೆ ರಾಮಣ್ಣ, ನಗರ ನೀರು ಸರಬರಾಜು ಇಲಾಖೆ ಚಂದ್ರಶೇಖರ್, ಟಿ.ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಕಛೇರಿ ಸಿಬ್ಬಂದಿ ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಜೈನ ಸಮಾಜದ ಮುಖಂಡರುಗಳಾದ ಬಾಬುಲಾಲ್, ಸುರೇಶ್ ಕುಮಾರ್, ಆರ್.ಜಯಂತಿಲಾಲ್, ಕಿಶೋರ್ ಕುಮಾರ್, ಅಶೋಕ್ ಕುಮಾರ್, ಕೈಲಾಶ್ ಕುಮಾರ್, ರೇಖಾಚಂದ್, ವಿಜಯ್‍ಕುಮಾರ್, ಗೌತಮ್‍ಚಂದ್ ಇತರರು ಪಾಲ್ಗೊಂಡಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here