ಮೋದಿ ಸರ್ಕಾರ ಜನರನ್ನು ಹಾದಿ ತಪ್ಪಿಸುತ್ತಿದೆ.: ಗುಲಾಂ ನಬಿ ಆಜಾದ್

0
11

ನವದೆಹಲಿ: 

      ದೇಶದ ಜನರಿಗೆ ದೊಡ್ಡ ಹಗರಣವಾದ ರಾಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ವಿಚಾರದಲ್ಲಿ ಮೋದಿ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಗುಲಾಂ ನಬಿ ಅಜಾದ್ ಆರೋಪಿಸಿದ್ದಾರೆ.

      ಇಂದು ಸುದ್ದಿಗಾರರೊಂಗಿಗೆ ಮಾತನಾಡಿದ ಅವರು, ರಾಫೆಲ್ ಯುದ್ಧ ವಿಮಾನ ವಿಚಾರದಲ್ಲಿ ಸಂಸತ್ತಿನ ಒಳಗೆ ಹಾಗೂ ಹೊರಗೆ ಕೇಂದ್ರಸರ್ಕಾರ ಸುಳ್ಳು ಹೇಳುತ್ತಿದೆ. ಎಚ್ ಎಎಲ್ ಗೆ ಗುತ್ತಿಗೆ ನೀಡಲಾಗಿತ್ತು ಎಂದು  ಕೇಂದ್ರಸರ್ಕಾರ ಹೇಳುತ್ತಿದೆ. ಆದರೆ, ಇದು ನಿಜವಲ್ಲಾ ಎಂದರು.

       ರಾಫೆಲ್ ವಿಚಾರದಲ್ಲಿ ಸುಳ್ಳನ್ನು ಹರಡಲಾಗುತ್ತಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್  ರಾಹುಲ್ ಗಾಂಧಿ ಮೇಲೆ  ವಾಗ್ದಾಳಿ ನಡೆಸಿದ ನಂತರ ಗುಲಾಮ್ ನಬಿ ಅಜಾದ್ ಈ ರೀತಿಯ ಹೇಳಿಕೆ ನೀಡಿದ್ದಾರೆ.ಸಿಬಿಐ, ಇಡಿ ಮತ್ತಿತರ ತನಿಖಾ ಸಂಸ್ಥೆಗಳನ್ನು  ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರತಿಪಕ್ಷಗಳ ಒಗ್ಗಟ್ಟು ಮುರಿಯಲು ಸರ್ಕಾರ ಯತ್ನಿಸುತ್ತಿದೆ. ನಾಲ್ಕೂವರೆ ವರ್ಷಗಳ ಹಿಂದೆ ಉದ್ಯೋಗ, ರೈತರ ಸಮಸ್ಯೆಗಳು ಹಾಗೂ ಮಹಿಳೆಯರ  ಭದ್ರತೆ ಬಗ್ಗೆ ಪ್ರಧಾನಿ ಮೋದಿ ಮಾತನಾಡುತ್ತಿದ್ದರು.
          ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here