ಎಸ್.ಪಿ.ಮುದ್ದಹನುಮೇಗೌಡರೇ ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ : ವೇಣುಗೋಪಾಲ್

0
11

ತುರುವೇಕೆರೆ:

       ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಎಸ್.ಪಿ.ಮುದ್ದಹನುಮೇಗೌಡರು ಸಮ್ಮಿಶ್ರ ಸರ್ಕಾರದ ಅಭ್ಯರ್ಥಿಯಾಗಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸ್ಪಷ್ಠಪಡಿಸಿದ್ದಾರೆ. 

      ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕೋಮುವಾದಿ ಬಿಜೆಪಿಯನ್ನು ದೇಶದಿಂದಲೇ ಹೊರಹಾಕುವ ಸಲುವಾಗಿ ಕಾಂಗ್ರೆಸ್ ಕಾರ್ಯಕರ್ತರು ಇಡೀ ದೇಶಾದ್ಯಂತ ಬಿಜೆಪಿ ಮುಕ್ತ ಭಾರತ ಮಾಡಬೇಕೆಂಬ ಸಂಕಲ್ಪವನ್ನು ಮಾಡಿದ್ದಾರೆ. ಇದರ ಪರಿಣಾಮ ಕೇವಲ 38 ಶಾಸಕರನ್ನು ಹೊಂದಿರುವ ಜೆಡಿಎಸ್ ಮುಖ್ಯಮಂತ್ರಿ ಸ್ಥಾನ ಕೊಟ್ಟು ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಿದೆ. ಉಪ ಚುನಾವಣೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರ ಹೋರಾಟದ ಫಲವಾಗಿ ಶಿವಮೊಗ್ಗ ಹೊರತು ಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಲ್ಲು ಗೆಲುವು ಸಿಕ್ಕಿದೆ. ಇದರ ಮೇರೆಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಹಾಗೂ ಜೆಡಿಎಸ್ ಒಂದಾಗಿ ಕಣಕ್ಕಿಳಿಯಲಿದೆ ಎಂದರು.

      ಈಗಾಗಲೇ ನಡೆದಿರುವ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಸೋಲಲು ಕಾರಣಗಳೇನು ಎಂಬುದನ್ನು ಕಾರ್ಯಕರ್ತರೊಂದಿಗೆ ಚರ್ಚಿಸಲಾಗುತ್ತಿದೆ. ಅಲ್ಲದೇ ಜೆಡಿಎಸ್-ಕಾಂಗ್ರೆಸ್‍ನ ಮೈತ್ರಿಯ ಕುರಿತೂ ಸಹ ಸ್ಥಳಿಯ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಲಾಗುತ್ತಿದೆ ಎಂದರು.

       ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಮಕೃಷ್ಣ, ತಾಲೂಕು ಉಸ್ತುವಾರಿ ಗೋಪಿನಾಥ್, ಜಿಲ್ಲಾ ಕಾರ್ಯದರ್ಶಿ ಹನುಮಂತಪ್ಪ, ಕಾಂಗ್ರೆಸ್ ಮುಖಂಡರಾದ ಚೌದ್ರಿ ಟಿ ರಂಗಪ್ಪ, ಗೀತಾ ರಾಜಣ್ಣ, ಸುಬ್ರಹ್ಮಣ್ಯ ಶ್ರೀಕಂಠೇಗೌಡ, ಹೆಚ್.ಕೆ.ನಾಗೇಶ್, ಉಗ್ರೇಗೌಡ, ಕಮಲಾ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here