ಶಿಕ್ಷಣ ಸಚಿವ ಎನ್ ಮಹೇಶ್ ರಾಜೀನಾಮೆ!!!

0
36

ಬೆಂಗಳೂರು:

      ಸಮ್ಮಿಶ್ರ ಸರಕಾರದಲ್ಲಿ ಒಂದೆಡೆ ಸಂಪುಟ ವಿಸ್ತರಣೆ ಗೊಂದಲ ಮುಂದುವರಿದಿರುವ ಬೆನ್ನಲ್ಲೇ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್ ಮಹೇಶ್ ತಮ್ಮ ಸಚಿವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. 

     ಸುದ್ದಿಗೋಷ್ಟಿ ನಡೆಸಿದ ಸಚಿವ ಮಹೇಶ್, ರಾಜ್ಯದ ಸಿಎಂ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸರಕಾರಕ್ಕೆ ಬೆಂಬಲ ಮುಂದುವರಿಸುತ್ತೇನೆ. 

       ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಶಾಸಕನಾಗಿ ಮುಂದುವರಿಯುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ. ಜೆಡಿಎಸ್‌ ಮತ್ತು ಬಿಎಸ್‌ಪಿ ಮಧ್ಯೆ ಚುನಾವಣಾ ಪೂರ್ವ ಮೈತ್ರಿಯಾಗಿತ್ತು. ಕುಮಾರಸ್ವಾಮಿ ನನಗೆ ದೊಡ್ಡ ಖಾತೆಯನ್ನೇ ಕೊಟ್ಟಿದ್ದರು. ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಚಾಮರಾಜನಗರ ಕೊಳ್ಳೇಗಾಲ ಕ್ಷೇತ್ರದ ಬಿಎಸ್‌ಪಿ ಶಾಸಕ ಎನ್‌ ಮಹೇಶ್ ಹೇಳಿದ್ದಾರೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

LEAVE A REPLY

Please enter your comment!
Please enter your name here