ನಾಳೆ ಬಿಜೆಪಿ ಕಾರ್ಯಕರ್ತರ ಸಮಾವೇಶ

ದಾವಣಗೆರೆ:

       ನಗರದ ರೇಣುಕ ಮಂದಿರದಲ್ಲಿ ಮಾ.17ರಂದು ಬೆಳಿಗ್ಗೆ 11 ಗಂಟೆಗೆ ಬಿಜೆಪಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ದಕ್ಷಿಣ ಕ್ಷೇತ್ರದ ಅಧ್ಯಕ್ಷ ಪೈ. ರಾಜನಹಳ್ಳಿ ಶಿವಕುಮಾರ ತಿಳಿಸಿದರು.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ, ದಾವಣಗೆರೆ ಉತ್ತರ ಶಾಸಕ ಎಸ್.ಎ.ರವೀಂದ್ರನಾಥ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಮತ್ತಿತರರು ಭಾಗವಹಿಸಲಿದ್ದಾರೆಂದು ಮಾಹಿತಿ ನೀಡಿದರು.

         ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಈಗಾಗಲೇ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಮಲಜ್ಯೋತಿ, ನನ್ನ ಪರಿವಾರ-ಬಿಜೆಪಿ ಪರಿವಾರ, ಕಮಲ ಸಂದೇಶ ಬೈಕ್ ರ್ಯಾಲಿ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದರು.

         ಜಿಲ್ಲೆಯ ಎಲ್ಲಾ 210 ಬೂತ್‍ಗಳಲ್ಲಿ ಹಾಗೂ 45 ಶಕ್ತಿ ಕೇಂದ್ರಗಳಲ್ಲಿ ಸಭೆ ಮಾಡಲಾಗಿದೆ. ಪ್ರತಿ ಬೂತ್‍ನಲ್ಲೂ 15-20 ಮನೆಗಳ ಮೇಲೆ ಬಿಜೆಪಿ ಧ್ವಜ ಹಾರಿಸಲಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ದಾವಣಗೆರೆ ದಕ್ಷಿಣದಿಂದ ಬಿಜೆಪಿ ಅಭ್ಯರ್ಥಿಗೆ 10 ಸಾವಿರ ಮತಗಳ ಮುನ್ನಡೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

        ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಶಾಂತಕುಮಾರ ಸೋಗಿ, ವಿಜಯ ಕುಮಾರ, ಮುರಳಿ, ಮಟ್ಟಿಕಲ್ ಕರಿಬಸಪ್ಪ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap