ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

ಬೆಂಗಳೂರು

        ನವೆಂಬರ್ 3 ರಂದು ನಡೆಯಲಿರುವ ಶಿವಮೊಗ್ಗ, ಬಳ್ಳಾರಿ ಮತ್ತು ಮಂಡ್ಯ ಲೋಕಸಭಾ ಹಾಗೂ ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ ಬೀಳಲಿದೆ.

          ಎಲ್ಲಾ ಕ್ಷೇತ್ರಗಳಲ್ಲಿಯೂ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿ ಅಭ್ಯರ್ಥಿಗಳ ಪರ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ 4, ಶಿವಮೊಗ್ಗ ಕ್ಷೇತ್ರದಲ್ಲಿ 4, ಮಂಡ್ಯ ಕ್ಷೇತ್ರದಲ್ಲಿ 9, ಜಮಖಂಡಿ ಹಾಗೂ ರಾಮನಗರ ಕ್ಷೇತ್ರಗಳಲ್ಲಿ ತಲಾ 7, ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

          ಬಳ್ಳಾರಿಯಲ್ಲಿ ಬುಧವಾರ ಸಂಜೆ ಜೆಡಿಎಸ್ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮತ್ತಿತರ ನಾಯಕರು ಪ್ರಚಾರ ನಡೆಸಿದರು. ಮತ್ತೊಂದೆಡೆ ಶಿವಮೊಗ್ಗದಲ್ಲಿ ಬಿಜೆಪಿ ಬೃಹತ್ ಸಮಾವೇಶ ಆಯೋಜಿಸಲಾಗಿತ್ತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap