ಕುಮಾರ ಸ್ವಾಮಿ ಅಧ್ಯಕ್ಷತೆಯಲ್ಲಿ ಸಂಪುಟ ಸಭೆ

0
3

ಬೆಂಗಳೂರು

     ಬೆಟ್ಟ ಕುರುಬ ಮತ್ತು ಕಾಡು ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆ ಮಾಡುವಂತೆ ರಾಜ್ಯ ಸಚಿವ ಸಂಪುಟ ಸಭೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಿದೆ.

       ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯ ನಂತರ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಬೆಟ್ಟ ಕುರುಬ ಜಾತಿಯನ್ನು ರಾಜ್ಯದ ಪರಿಶಿಷ್ಟ ಪಂಗಡದ ಕ್ರಮಸಂಖ್ಯೆ 16 ರಲ್ಲಿ ‘ಕಾಡು ಕುರುಬ’ ಜಾತಿಗೆ ಸಮಾನಂತರವಾಗಿ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ ಎಂದರು.

      ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾಕ್ಕಾಗಿ 79.69 ಕೋಟಿ ಯೋಜನೆ ಮತ್ತು 60 ನಾಡ ಕಚೇರಿಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು 10 ಕೋಟಿ ವೆಚ್ಚ ಮಾಡುವ ಪ್ರಸ್ತಾವನೆಗೆ ಸಂಪುಟ ಅನುಮತಿ ನೀಡಿದೆ. ಕಳೆದ 2014ರಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಗಳನ್ನು ಗ್ರೇಡ್ 2 ಅಡಿಯಲ್ಲಿ ನೇಮಕ ಮಾಡಿಕೊಂಡಿದ್ದು, ಇವರಿಗೆ ಬಡ್ತಿ ನೀಡಲು ತೀರ್ಮಾನಿಸಲಾಗಿದೆ ಎಂದು ಬಂಡೆಪ್ಪ ಕಾಶೆಂಪೂರ್ ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here