ಬಸ್ ಸ್ಟಾಂಡ್ ನಲ್ಲಿ ಬಾಣಂತಿಯ ಪರದಾಟ

0
26

ದಾವಣಗೆರೆ:

        ಕೇಂದ್ರ ಸರ್ಕಾರದ ವಿರುದ್ಧ ಇಂದು ಮತ್ತು ನಾಳೆ ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು. ಬಂದ್ ಹಿನ್ನೆಲೆಯಲ್ಲಿ ದಾವಣಗೆರೆಯ ಬಸ್ ನಿಲ್ದಾಣದಲ್ಲಿ ಗರ್ಭಿಣಿಯೊಬ್ಬರು ಪರದಾಡಿದ್ದಾರೆ.

         ನಗರದ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಬಸ್ ವ್ಯವಸ್ಥೆ ಇಲ್ಲದೇ ನಿಲ್ದಾಣದಲ್ಲಿ ಕಾದು ಕುಳಿತಿದ್ದ ಗರ್ಭಿಣಿ, ಬಸ್ ಸಿಗದೇ ಬೆಂಚ್ ಮೇಲೆಯೇ ಮಲಗಿರುವ ದೃಶ್ಯ ಮನಕಲಕುವಂತಿತ್ತು.

        ಹಿರಿಯೂರು ತಾಲೂಕಿನ ಅದಿವಾಲ ಗ್ರಾಮದ ನಿವಾಸಿ ಗರ್ಭಿಣಿ ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಅವರು ಡಿಸ್ಚಾರ್ಜ್ ಆಗಿದ್ದು, ಬಸ್ ಗಾಗಿ ಕಾಯುತ್ತಿದ್ದರು. ಆದ್ರೆ ಕೆಎಸ್‍ಆರ್‍ಟಿಸಿ ಸಿಬ್ಬಂದಿ ಏಕಾಏಕಿ ಬಸ್ ಸಂಚಾರ ಸ್ಥಗಿತಗೊಳಿಸಿ ದ್ದರಿಂದ ಖಾಸಗಿ ಬಸ್ ನಲ್ಲಿ ಪ್ರಯಾಣಿಸಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ. ದಿಕ್ಕು ತೋಚದ ಸ್ಥಿತಿಯಲ್ಲಿ ಸಂಬಂಧಿಕರಿದ್ದು, ಗರ್ಭಿಣಿ ನಿಲ್ದಾಣದಲ್ಲೇ ಬೆಂಚ್ ಮೇಲೆ ಮಲಗಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here