ನಗರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ…!!

ಬೆಂಗಳೂರು

       ಪದವೀಧರರು ಸೇರಿದಂತೆ ಹೆಚ್ಚು ವರ್ಷಗಳ ಸೇವೆಸಲ್ಲಿರುವ ಶಿಕ್ಷಕರಿಗೆ ಬಡ್ತಿ ನೀಡುವುದು ಸೇರಿ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.ನೃಪತುಂಗ ರಸ್ತೆಯಲ್ಲಿರುವ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಮುಂಭಾಗ ಸೇರಿದ ಸಾವಿರಾರು ಪ್ರಾಥಮಿಕ ಶಾಲಾ ಶಿಕ್ಷಕರು ಹಲವಾರು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿದರು.

      ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನೇ ನಿಲ್ಲಿಸಲಾಗಿದೆ.ವರ್ಗಾವಣೆಗೆ ಸಂಬಂಧಿಸಿದಂತೆ ಕೆಲವಾರು ತಾಂತ್ರಿಕ ಸಮಸ್ಯೆ, ಗೊಂದಲ ಎಲ್ಲವೂ ನಿವಾರಣೆ ಆಗಿವೆ. ಸರಕಾರ ಆದಷ್ಟು ಬೇಗ ಮುಂದಿನ ಶೈಕ್ಷ ಣಿಕ ವರ್ಷಕ್ಕೆ ಅನುಕೂಲ ಆಗುವಂತೆ ಶಿಕ್ಷ ಕರ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಬೇಕು ಎಂದು ಪಟ್ಟುಹಿಡಿದರು.

      ರಾಜ್ಯದಲ್ಲೆಡೆ 28 ಸಾವಿರದಷ್ಟು ಮುಖ್ಯೋಪಾಧ್ಯಾಯರು, ಬಡ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ 10 ರಿಂದ 30 ವರ್ಷಗಳಲ್ಲಿ ಯಾವುದೇ ರೀತಿಯ ಆರ್ಥಿಕ ಸೌಲಭ್ಯವೇ ದೊರೆತಿಲ್ಲ.ಶಾಲಾ ಆಡಳಿತ ಎಲ್ಲಾ ಕೆಲಸದ ನಿರ್ವಹಣೆ ಮಾಡುತ್ತಿದ್ದರೂ ಆರ್ಥಿಕ ಸೌಲಭ್ಯ ಮಾತ್ರ ಮರೀಚಿಕೆ. ಅವರ ಜೊತೆ ಕೆಲಸ ಮಾಡುವಂತಹ ಸಹ ಶಿಕ್ಷ ಕರಿಗೆ ಎಲ್ಲಾ ರೀತಿಯ ಆರ್ಥಿಕ ಸೌಲಭ್ಯ ದೊರೆಯುತ್ತಿವೆ. ಮುಖ್ಯೋಪಾಧ್ಯಾಯರು, ಬಡ್ತಿ ಹೊಂದಿದ ಮುಖ್ಯೋಪಾಧ್ಯಾಯರಿಗೆ ಆರ್ಥಿಕ ಸೌಲಭ್ಯ ಒದಗಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

        ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣ ಸ್ವಾಮಿ ,ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿನ ಶಿಕ್ಷಕರ ವರ್ಗಾವಣೆಯಾಗಬೇಕೆಂದು ಆದೇಶವಾಗಿ ಮೂರು ವರ್ಷ ಕಳೆದರೂ ಆ ಕೆಲಸವಾಗಿಲ್ಲ. ಇದರಿಂದ ಕನಿಷ್ಠ ಮೂಲ ಸೌಕರ?ಯವಿಲ್ಲದ ಪ್ರದೇಶದಲ್ಲಿ ಕೆಲಸ ಮಾಡುವ ಶಿಕ್ಷಕರು ಹಾಗೂ ನಗರದಲ್ಲಿರುವ ಶಿಕ್ಷಕರು ಅಲ್ಲೇ ಝಂಡಾ ಹೂಡಿದ್ದಾರೆ.

         ನಗರದಲ್ಲಿರುವವರು -ಗ್ರಾಮೀಣಕ್ಕೆ, ಗ್ರಾಮೀಣದಲ್ಲಿರುವವರು ನಗರಕ್ಕೆ ವರ್ಗವಣೆಯಾಗಬೇಕೆಂದು ಆಗಿನ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರ ಕಾಲದಲ್ಲಿ ಆದೇಶ ಜಾರಿಗೆ ಬಂತು. ಇಲ್ಲಿಯ ತನಕ ಯಾವುದೇ ವರ್ಗಾವಣೆ ಪ್ರಕ್ರಿಯೆ ನಡೆಸಿಲ್ಲ ಎಂದರು.
ಪ್ರತಿಭಟನೆ ಬಳಿಕ, ಶಿಕ್ಷಣ ಇಲಾಖೆ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಶಿಕ್ಷಕರ ಬೇಡಿಕೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಚಂದ್ರಶೇಖರ್ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap