ಅತ್ಯಾಚಾರಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ದಾವಣಗೆರೆ:

         ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಯುವತಿಯ ಮೇಲೆ ಅತ್ಯಾಚಾರ ನಡೆಸಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ, ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಮಹಿಳಾ ಘಟಕದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

       ನಗರದ ಜಯದೇವ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೊರಟ ಕಾರ್ಯಕರ್ತೆಯರು ಎಸಿ ಕಚೆರಿಗೆ ತೆರಳಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

       ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಘಟಕದ ಅಧ್ಯಕ್ಷೆ ಸುವರ್ಣಮ್ಮ, ಕಕ್ಕರಗೊಳ್ಳದಿಂದ ನಿತ್ಯ ಬೆಳಿಗ್ಗೆ ದಾವಣಗೆರೆಯ ಬಟ್ಟೆ ಅಂಗಡಿಗೆ ಕೆಲಸಕ್ಕೆ ಬಂದು, ರಾತ್ರಿ ಊರಿಗೆ ವಾಪಾಸ್ಸಾಗುತ್ತಿದ್ದ ವೇಳೆ ಕಳೆದ ಸೆಪ್ಟೆಂಬರ್ 9ರಂದು ರಾತ್ರಿ ಆವರಗೊಳ್ಳ ರಸ್ತೆಯ ಕೇಂದ್ರಿಯ ವಿದ್ಯಾಲಯ ಪಕ್ಕದ ಕರೂರು ರಸ್ತೆಯ ನಿರ್ಜನ ಪ್ರದೇಶದಲ್ಲಿ ಯುವತಿ ರಂಜಿತಾ ಮೇಲೆ ಅತ್ಯಾಚಾರ ಎಸಗಿ, ಅಮಾನುಷವಾಗಿ ಹತ್ಯೆ ಮಾಡಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

         ನಿರ್ಜನ ಪ್ರದೇಶದಲ್ಲಿ ರಂಜಿತಾಳನ್ನು ಎಳೆದೊಯ್ದು, ಅಮಾನುಷವಾಗಿ ಅತ್ಯಾಚಾರ ಎಸಗಿದ್ದಲ್ಲದೇ, ನಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ರಂಜಿತಾ ಅತ್ಯಾಚಾರಕ್ಕೊಳಗಾಗಿ, ಹತ್ಯೆಯಾಗಿ 9 ದಿನಗಳೇ ಕಳೆದರೂ ಪೊಲೀಸ್ ಇಲಾಖೆ ಈವರೆಗೂ ಯಾರೊಬ್ಬರನ್ನೂ ಬಂಧಿಸದೇ ಇರುವುದು ಸಾಕಷ್ಟು ಅನುಮಾನಗಳಿಗೂ ಎಡೆ ಮಾಡಿಕೊಡುತ್ತಿದೆ ಎಂದು ಆರೋಪಿಸಿದರು.

           ರಂಜಿತಾಳ ಮೇಲೆ ಅತ್ಯಾಚಾರ ಎಸಗಿ, ಹತ್ಯೆಗೈದ ಪ್ರಕರಣದಲ್ಲಿ ಇಬ್ಬರಿಗಿಂತಲೂ ಹೆಚ್ಚು ಜನರಿರುವ ಶಂಕೆ ವ್ಯಕ್ತವಾಗುತ್ತಿದೆ. ಇದೊಂದು ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ ಎಂಬುದು ಮೇಲ್ನೋಟಕ್ಕೆ ಕಂ ಡು ಬರುತ್ತಿದೆ. ಆದ್ದರಿಂದ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿ ಪಡಿಸಬೇಕೆಂದು ಆಗ್ರಹಿಸಿದರು.

         ಪ್ರತಿಭಟನೆಯಲ್ಲಿ ಕರವೇ ಮಹಿಳಾ ಘಟಕದ ಮುಖಂಡರಾದ ಗೀತಾ, ಮಂಜುಳಾ, ಮಾಲಾ ನಾಗರಾಜ, ನೇತ್ರಮ್ಮ, ಶಿವಲೀಲಾ, ಮಂಜುಳಾ, ಸಂಗೀತಾ, ಸುಜತಾ, ಶೋಭಮ್ಮ, ವಸಂತಮ್ಮ, ಶಾಂತಮ್ಮ, ರಾಜೇಶ್ವರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap