ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ

0
3

ಗುಬ್ಬಿ

        ಕೇಂದ್ರ ಸರ್ಕಾರದ ರೈತ ಮತ್ತು ಕಾರ್ಮಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳು, ರೈತ ಸಂಘ, ಹಸಿರು ಸೇನೆ ಮತ್ತು ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ನಂತರ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ರಚಿಸಿ ಕೇಂದ್ರ ಸರ್ಕಾರದ ಕಾರ್ಮಿಕ ನೀತಿಯ ವಿರುಧ್ದ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.

         ಕಾರ್ಮಿಕ ಸಂಘಟನೆಯ ಮುಖಂಡ ಅಜ್ಜಪ್ಪ ಮಾತನಾಡಿ ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಮತ್ತು ಕಾರ್ಮಿಕ ನೀತಿಯನ್ನು ಕೂಡಲೆ ಹಿಂಪಡೆಯಬೇಕು. ಹಗಲಿರುಳೆನ್ನದೆ ದುಡಿಯುತ್ತಿರುವ ಕಾರ್ಮಿಕರಿಗೆ ಸಾಮಾಜಿಕ ಸಮಾನತೆ ನೀಡುವುದು ಸೇರಿದಂತೆ ಕೂಡಲೆ ರೈತರ ಸಂಪೂರ್ಣ ಸಾಲಮನ್ನಾ ಮಾಡುವಂತೆ ಒತ್ತಾಯಿಸಿದ ಅವರು ಅಗತ್ಯ ವಸ್ತುಗಳಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ, ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ, ಕನಿಷ್ಟ ವೇತನ, ಬಂಡವಾಳಗಾರರ ಪರವಾಗಿ ಕಾರ್ಮಿಕ ಕಾಯ್ದೆಗಳ ತಿದ್ದುಪಡಿಯಂತಹ ಕಾರ್ಮಿಕರ ಪ್ರಶ್ನೆಗಳ ಜೊತೆಗೆ ಈ ಭಾರಿ ಮುಖ್ಯವಾಗಿ ದೇಶದ ಕೃಷಿಕರ ಪರವಾಗಿ ಡಾ:ಸ್ವಾಮಿನಾಥನ್ ವರದಿಯನ್ವಯ ಎಲ್ಲಾ ಕೃಷಿ ಉತ್ಪನ್ನಗಳಿಗೆ ಉತ್ಪಾದನಾ ವೆಚ್ಚದ ಮೇಲೆ ಶೇ.50 ರಷ್ಟು ಲಾಭವನ್ನು ಸೇರಿಸಿದ ಕನಿಷ್ಠ ಬೆಂಬಲ ಬೆಲೆ ಯನ್ನು ಖಾತರಿಗೊಳಿಸುವ ಕಾನೂನನ್ನು ಜಾರಿಗೊಳಿಸಬೇಕು ಮತ್ತು ರೈತರು ಹಾಗೂ ಕೃಷಿ ಕಾರ್ಮಿಕರ ಮೂಲಭೂತ ಸಮಸ್ಯೆಗಳನ್ನು ತ್ವರಿತವಾಗಿ ಬಗಹರಿಸುವಂತೆ ಕೇಂದ್ರ ಸರ್ಕಾರವನ್ನು ಒತಾಯಿಸಿದರು.

          ಭಾರತ್ ಬಂದ್ ಹಿನ್ನೆಲೆಯಲ್ಲಿ ತಾಲ್ಲೂಕಿನಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು, ಸರ್ಕಾರಿ ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿತ್ತು. ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು, ಬಸ್ ಸಂಚಾರ ಇಲ್ಲದ ಕಾರಣ ಕಚೇರಿಗಳಲ್ಲಿ ನೌಕರರ ಹಾಜರಾತಿ ಕಡಿಮೆಯಾಗಿತ್ತು. ಒಟ್ಟಾರೆ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

         ಪ್ರತಿಭಟನೆಯಲ್ಲಿ ತಾಲ್ಲೂಕು ರೈತ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಗೌಡ, ಕಾರ್ಯದರ್ಶಿ ಲೋಕೇಶ್, ಹುಚ್ಚೇಗೌಡ, ಯತೀಶ್, ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳಾದ ಅನುಸೂಯ, ಸರೋಜಮ್ಮ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಮುಖಂಡರಾದ ಲಕ್ಷ್ಮಣ್, ವೀರಣ್ಣ, ಹಸಿರು ಸೇನೆಯ ಅಧ್ಯಕ್ಷ ಸಿ.ಟಿ.ಕುಮಾರ್, ಜಗದೀಶ್ ಸೇರಿದಂತೆ ಅಂಗನವಾಡಿ ನೌಕರರು, ಕಾರ್ಮಿಕರು, ರೈತರ ಸಂಘಟನೆಗಳ ಮುಖಂಡರುಗಳು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here