ಪುಟ್ಟರಂಗಶೆಟ್ಟಿ ತಲೆದಂಡಕ್ಕೆ ಹೆಚ್ಚಿದ ಒತ್ತಡ

0
21

ಬೆಂಗಳೂರು

        ಹಿಂದುಳಿದ ವರ್ಗಗಳ ಸಚಿವ ಪುಟ್ಟರಂಗಶೆಟ್ಟಿ ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬರ ಬಳಿ 25 ಲಕ್ಷರೂ ನಗದು ಹಣ ವಿಕಾಸೌಧದಲ್ಲೇ ಪತ್ತೆಯಾದ ಹಿನ್ನಲೆಯಲ್ಲಿ ಸಚಿವರನ್ನು ವಜಾ ಮಾಡಬೇಕು ಎಂಬ ಒತ್ತಡ ಹೆಚ್ಚಾಗಿದೆ.

       ಇದೆಲ್ಲರ ನಡುವೆ ಇದಕ್ಕೆ ನನಗೂ ಸಂಬಂಧವಿಲ್ಲ ಯಾವುದೇ ತನಿಖೆಗೂ ಸಿದ್ದ ಎಂದು ಸಚಿವ ಪುಟ್ಟರಂಗಶೆಟ್ಟಿ ಚಾಮರಾಜನಗರದಲ್ಲಿ ಸವಾಲ್ ಹಾಕಿದ್ದಾರೆ.

       ಸಚಿವರನ್ನು ಮತ್ತು ಅವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಟೈಪಿಸ್ಟ್ ಮೋಹನ್ ಅವರನ್ನು ಕೂಡಲೇ ವಜಾ ಮಾಡಬೇಕು ಎಂದು ಬಿಜೆಪಿ ಒತ್ತಾಯ ಮಾಡಿದೆ.

         ಇದರ ಜೊತೆಗೆ ಜೆಡಿಎಸ್ ನಲ್ಲೂ ಸಚಿವರ ರಾಜಿನಾಮೆ ಪಡೆಯಬೇಕು ಎಂಬ ಒತ್ತಡ ಕೇಳಿ ಬಂದಿದೆ.ಈ ಎಲ್ಲ ಬೆಳವಣಿಯ ನಡುವೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಹುಬ್ಬಳ್ಳಿಯಲ್ಲಿ ಇದರ ಬಗ್ಗೆ ಪ್ರತಿಕ್ರಿಯೆ ನೀಡಿ, ಸಚಿವರ ಕಚೇರಿಯಲ್ಲಿ ಕೆಲಸ ಮಾಡುವ ಟೈಪಿಸ್ಟ್ ಬಳಿ 25 ಲಕ್ಷರೂ ನಗದು ಹಣ ವಿಕಾಸಸೌಧಲ್ಲೇ ಪತ್ತೆಯಾದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ . ಇದರಲ್ಲಿ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಆಕ್ರಮ ಆರೋಪ ಸಾಬೀತಾದಲ್ಲಿ ತಪ್ಪಿತಸ್ಥರರ ವಿರುದ?ದ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.

       ಈ ನಡುವೆ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಸಚಿವರ ಕಚೇರಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಮೋಹನ್ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.ಈ ಘಟನೆ ಕುರಿತು ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ವಿಧಾನಸಭೆಯ ವಿರೋಧಪಕ್ಷದನಾಯಕ ಬಿಎಸ್. ಯುಡಿಯೂರಪ್ಪ ಅವರು ಕೂಡಲೇ ಸಚಿವರು ರಾಜೀನಾಮೆ ಕೊಡಬೇಕು ಇಲ್ಲವಾದಲ್ಲಿ ಅವರನ್ನು ವಜಾ ಮಾಡಬೇಕು ಎಂದು ಆಗ್ರಹಪಡಿಸಿದ್ದಾರೆ.ಮೈತ್ರಿ ಸರ್ಕಾರದಲ್ಲಿ ಭ್ರಷ್ಟಾಚಾರ ಮೇರೆ ಮೀರುತ್ತಿದೆ ಎಂದು ಅವರು ಅಪಾದಿಸಿದ್ದಾರೆ.

       ಇನ್ನೊಂದು ಕಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಘಟನೆ ಕುರಿತು ಮಾತನಾಡಿ, ನೈತಿಕಹೊಣೆ ಹೊತ್ತು ಸಚಿವರು ರಾಜಿನಾಮೆ ಕೊಡಬೇಕು ಸತ್ಯ ಜನರಿಗೆ ತಿಳಿಯಬೇಕಾದರೆ ಸರಿಯಾದ ತನಿಖೆ ನಡೆಯಬೇಕು ಎಂದರು ಮತ್ತೊಂದು ಕಡೆ ಜೆಡಿಎಸ್ ನಾಯಕ, ಮಾಜಿ ಸಚಿವ ಬಸವರಾಜ ಹೊರಟ್ಟಿ ಅವರು ಸಚಿವರು ನೈತಿಕ ಹೊಣೆ ಹೊತ್ತು ರಾಜಿನಾಮೆ ಕೊಡಬೇಕು ಎಂದು ಹೇಳಿದ್ದಾರೆ.

          ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರು ಮಾತನಾಡಿ, ಸಚಿವರನ್ನು ವಜಾ ಮಾಡಬೇಕು ಈ ಘಟನೆ ಮೈತ್ರಿ ಸರ್ಕಾರ ಭಾರಿ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ಹಿಡಿದ ಕನ್ನಡಿಯಾಗಿದೆ ಎಂದು ಹೇಳಿದ್ದಾರೆ.

           ಈ ಎಲ್ಲ ಬೆಳವಣಿಗೆಯ ನಡುವೆ ಸಚಿವ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರದಲ್ಲಿ ಪ್ರತಿಕ್ರಿಯೆ ನೀಡಿ, ಈ ಹಣ ನಮ್ಮದಲ್ಲ, ಇದಕ್ಕೂ ನಮಗೂ ಸಂಬಂಧವಿಲ್ಲ ಇದರ ಬಗ್ಗೆ ಯಾವುದೆ ತನಿಖೆಗೂ ತನಿಖೆಗೂ ಸಿದ್ದ ಎಂದು ಹೇಳಿದ್ದಾರೆ.

          ಸಚಿವರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಟೈಪಿಸ್ಟ್ ಮೋಹನ್ ಅವರನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮಾಡುತ್ತಿದ್ದಾರೆ ಎಂದು ಹೆಚ್ಚುವರಿ ಪೊಲಿಸ್ ಕಮೀಷನರ್ ದೇವರಾಜ್ ಹೇಳಿದ್ದು, ಸತ್ಯ ಸಂಗತಿ ತಿಳಿಯಲು ಭ್ರಷ್ಟಾಚಾರ ನಿಗ್ರಹದಳದಿಂದ ತನಿಖೆಗೆ ಆದೇಶ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here