ಯಲಹಂಕದಲ್ಲಿ ಲ್ಯಾಂಡ್ ಆದ ರಫೇಲ್ ಜೆಟ್…!!!

0
134

ಬೆಂಗಳೂರು:

        ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ರಫೇಲ್ ಯುದ್ಧ ವಿಮಾನಗಳು ಅಂತೂಇಂತು ಭಾರತಕ್ಕೆ ಬಂದಿವೆ. ಕೆಲವೇ ದಿನಗಳಲ್ಲಿ ನಡೆಯಲಿರುವ ಏರೋ ಇಂಡಿಯಾ 2019ಗೆ ಪ್ರದರ್ಶನಕ್ಕಾಗಿ ಫ್ರಾನ್ಸಿನ ಡಸಾಲ್ಟ್ ಕಂಪನಿಯ 3 ರಫೇಲ್ ಜೆಟ್ ವಿಮಾನಗಳು ಯಲಹಂಕ ವಾಯುನೆಲೆಯಲ್ಲಿ ಲ್ಯಾಂಡ್ ಆಗಿವೆ.

       ಆಗಮಿಸಿರುವಂತಹ ಮೂರರಲ್ಲಿ 2 ವಿಮಾನಗಳು ವೈಮಾನಿಕ ಪ್ರದರ್ಶನ ನೀಡಿದರೆ ಒಂದು ವೀಕ್ಷಣೆಗೆ ಇರಿಸಲಾಗುತ್ತದೆ ಎಂದು ಡೆಸಾಲ್ಟ್ ಸಂಸ್ಥೆ ತಿಳಿಸಿದೆ. ಹಾರಾಟ ಪ್ರದರ್ಶನ ನೀಡಲಿರುವ ವಿಮಾನಗಳ ಅಧಿಕೃತ ಪೂರ್ವಸಿದ್ಧತೆಯ ಹಾರಾಟ ಗುರುವಾರದಿಂದ ಆರಂಭವಾಗಲಿದೆ. 12ನೇ ಆವೃತ್ತಿಯ ಏರೋ ಇಂಡಿಯಾ ವೈಮಾನ ನಿಕ ಪ್ರದರ್ಶನ ಫೆ.20 ರಿಂದ ಫೆ.24ರವರೆಗೆ ನಡೆಯಲಿದ್ದು ,ವಿಕ್ಷಕರಿಗೆ ರೋಮಾಂಚಕಾರಿ ಅನುಭವ ನೀಡುವುದರಲ್ಲಿ ಅನುಮಾನವಿಲ್ಲ ಎಂದು ಆಯೋಜಕರು ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here