ರಾಹುಲ್ ರಾಜೀನಾಮೆ ನೀಡಬೇಕು : ಬಿಜೆಪಿ

ಬೆಂಗಳೂರು

       ಕಾಂಗ್ರೆಸ್ ಪಕ್ಷದ ಮುಖಂಡರು ಭ್ರಷ್ಟಾಚಾರ ಮಾತ್ರವಲ್ಲದೆ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಜ್ಜನ್ ಕುಮಾರ್ ಪ್ರಕರಣದಲ್ಲಿ ಸಾಬೀತು ಆಗಿರುವುದರಿಂದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ವಕ್ತಾರ ಸಂಬೀತ್ ಪಾತ್ರ ಆಗ್ರಹಿಸಿದ್ದಾರೆ.

         ಕಳೆದ 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್‍ಕುಮಾರ್ ಗೆ ದಿಲ್ಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ಮುಖಂಡರು ಭ್ರಷ್ಟಾಚಾರ ಮಾತ್ರವಲ್ಲದೆ, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಬೀತಾಗಿರುವುದರಿಂದ ಕಾಂಗ್ರೆಸ್ ಮುಖಂಡರು ದೇಶದ ಕ್ಷಮೆಯಾಚಸಲಿ ಎಂದು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

        ಕಾಂಗ್ರೆಸ್ ನಾಯಕ ಸಜ್ಜನ್‍ಕುಮಾರ್ ಗೆ ದಿಲ್ಲಿ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುವುದು ಇದೊಂದು ಐತಿಹಾಸಿಕ ತೀರ್ಪು ಆಗಿದ್ದು, ಸಜ್ಜನ್ ಕುಮಾರ್ ಅವರಿಗೆ ಮರಣದ ವರೆಗೆ ಜೈಲು ಶಿಕ್ಷೆ ವಿಧಿಸಿದೆ. ಡಿ.31ರೊಳಗಾಗಿ ಅವರು ಶರಣಾಗುವಂತೆ ಕೋರ್ಟ್ ಸೂಚಿಸಿದೆ ಎಂದು ತಿಳಿಸಿದರು.

        ಇಂದಿರಾಗಾಂಧಿ ಹತ್ಯೆ ನಂತರ 1984ರ ನವೆಂಬರ್.1 ರಂದು ದಿಲ್ಲಿಯ ಕಂಟೋನ್ಮೆಂಟ್ ಬಳಿಕ ರಾಜ್ ನಗರದಲ್ಲಿ ಒಂದೇ ಕುಟುಂಬದ ಐವರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಅವರು ದೋಷಿ ಎಂದು ನ್ಯಾಯಾಲಯ ಹೇಳಿದೆ. ಪ್ರಸ್ತುತ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಅವರ ಹೆಸರೂ ಈ ಪ್ರಕರಣದಲ್ಲಿದೆ ಎಂದು ಆರೋಪಿಸಿದರು.

         ರಫೇಲ್ ಮತ್ತು ಸಜ್ಜನ್ ಕುಮಾರ್ ಪ್ರಕರಣಗಳಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ. ಹಲವರನ್ನು ಸಿಖ್ ಎಂಬ ಕಾರಣಕ್ಕೆ ಜೀವಂತ ದಹಿಸಿದ್ದರು.ಅನೇಕ ಬಾರಿ ಸಜ್ಜನ್ ಕೌರ್‍ಗಳ ಭಾಷಣ, ಘೋಷಣೆಗಳಲ್ಲಿ ಒಬ್ಬ ಸಿಖ್ ಸಹ ಬದುಕುಳಿಯಬಾರದು ಎಂದು ಹೇಳುವುದನ್ನು ನಾವು ಕೇಳಿದ್ದೆವು. ಇಂದು ಈ ತೀರ್ಪು ಐತಿಹಾಸಿಕವಾಗಿದ್ದು, ಸತ್ಯಕ್ಕೆ ಜಯವಾಗಿದೆ ಎಂದು ನುಡಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap