ಮಾರಕಾಸ್ತ್ರಗಳಿಂದ ಬೆದರಿಸಿ ಸುಲಿಗೆ ಮಾಡುತ್ತಿದ್ದ ಐವರ ಬಂಧನ

ಬೆಂಗಳೂರು

           ಅಪರಾಧ ಕೃತ್ಯಗಳಲ್ಲಿ ಬಂಧಿತರಾಗಿ ಜೈಲಿನಲ್ಲಿ ಪರಿಚಯವಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದ ನಂತರ ಗ್ಯಾಂಗ್ ಕಟ್ಟಿಕೊಂಡು ಕಾರು, ದ್ವಿಚಕ್ರ ವಾಹನಗಳಲ್ಲಿ ಒಂಟಿಯಾಗಿ ಬರುವವರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ಸುಲಿಗೆ ಮಾಡುತ್ತಿದ್ದ ಐವರನ್ನು ದೊಡ್ಡಬಳ್ಳಾಪುರ ಉಪವಿಭಾಗದ ಪೊಲೀಸರು ಬಂಧಿಸಿ 26,50,000 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

        ಗ್ಯಾಂಗ್‍ನಲ್ಲಿದ್ದ ಅನೇಕಲ್‍ನ ವಿಜಯ್ ಕುಮಾರ್, ಮಡಕಶಿರಾದ ಹರೀಶ್, ಶಿರಾದ ರೇಣುಕಾರಾಜ, ಆಂಧ್ರ ಪ್ರದೇಶದ ಪಲಮನೇರಿನ ವಿಜಿ, ತ್ಯಾಮಗೊಂಡ್ಲುವಿನ ವೆಂಕಟೇಶ್‍ನನ್ನು ಬಂಧಿಸಿ 26,50,000 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ವಸ್ತುಗಳನ್ನು ವಶಪಡಿಸಿಕೊಂಡು ಗ್ಯಾಂಗ್‍ನಲ್ಲಿದ್ದು ತಲೆಮರೆಸಿಕೊಂಡಿರುವ ಇನ್ನು ಮೂವರಿಗಾಗಿ ತೀವ್ರ ಶೋಧ ನಡೆಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರಚ ಎಸ್‍ಪಿ ಶಿವಕುಮಾರ್ ತಿಳಿಸಿದ್ದಾರೆ.

        ಹಿಂದೆಯೇ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಪೊಲೀಸರಿಗೆ ಸಿಕ್ಕಿಬಿದ್ದು ಜೈಲಿಗೆ ಸೇರಿದ್ದ ಐವರು ಜೈಲಿನಲ್ಲಿ ಪರಸ್ಪರ ಪರಿಚಯವಾಗಿ ಜಾಮೀನಿನ ಮೇಲೆ ಹೊರಬಂದ ನಂತರ ಮತ್ತೆ ದರೋಡೆ, ಸರಗಳ್ಳತನ, ವಾಹನಗಳ ಕಳವು ಸೇರಿದಂತೆ ಚಾಕು ತೋರಿಸಿ ಹೆದರಿಸುವ ಸುಲಿಗೆ ಮಾಡುತ್ತಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಕಾರ್ಯಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದರೋಡೆಕೋರರನ್ನು ಹಿಡಿಯುವಲ್ಲಿ ಯಶಸ್ವಿಯಾದ ಪೊಲೀಸರಿಗೆ ಎಸ್‍ಪಿ ಶಿವಕುಮಾರ್ ಬಹುಮಾನ ಘೋಷಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap