ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆ ದೇವೇಗೌಡರ ಪತ್ನಿ

0
5

ಬೆಂಗಳೂರು:

        ಕರ್ನಾಟಕದಲ್ಲಿ ಲೋಕಸಭೆಗೆ ನಾಳೆ ಮೊದಲ ಹಂತದ ಚುನಾವಣೆ ನಡೆಯಲಿದೆ.ತುಮಕೂರು ಲೋಕಸಭೆ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ಮಾಡಿದ ಮಾಜಿ ಪ್ರಧಾನಿ ದೇವೇಗೌಡರು ಇದೀಗ ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ.

        ನಿನ್ನೆ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.ರಾಜಕೀಯ ನಾಯಕರು ತಮ್ಮ ತಮ್ಮಲ್ಲಿಯೇ ಗೆಲುವು-ಸೋಲಿನ ಲೆಕ್ಕಾಚಾರ ಹಾಕಿಕೊಳ್ಳುತ್ತಿದ್ದಾರೆ. ತುಮಕೂರು ಕ್ಷೇತ್ರದಿಂದ ಕಣಕ್ಕಿಳಿದಿರುವ ಹೆಚ್.ಡಿ.ದೇವೇಗೌಡರು ಇಂದು ಜೆಡಿಎಸ್ ಮುಖಂಡರ ಮನೆಗೆ ತೆರಳಿ ವಿವಿಧ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

         ತುಮಕೂರಿನ ಜಯನಗರದಲ್ಲಿರುವ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ನಿವಾಸಕ್ಕೆ ಭೇಟಿ ನೀಡಿದ ದೇವೇಗೌಡರು, ಕೆಲಕಾಲ ರಾಜಕೀಯ ವಿಚಾರವಾಗಿ ಚರ್ಚೆ ನಡೆಸಿದರು. ಆನಂತರ ಮನೆ ಮನೆ ಪ್ರಚಾರಕ್ಕೆ ತೆರಳಿ ಮತದಾರರ ಮನಗೆಲ್ಲಲು ಕೊನೆ ಹಂತದ ಕಸರತ್ತು ನಡೆಸುತ್ತಿದ್ದಾರೆ.

         ಲೋಕಸಭೆ ಚುನಾವಣೆಗೆ ತುಮಕೂರಿನಿಂದ ಸ್ಪರ್ಧಿಸಿರುವ ದೇವೇಗೌಡರಿಗೆ ಗೆಲುವು ಸಿಗಲಿ ಎಂದು ಅವರ ಪತ್ನಿ ಚನ್ನಮ್ಮ ದೇವೇಗೌಡರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದರು.ಸೊಸೆ ಸೌಮ್ಯ ರಮೇಶ್ ಜೊತೆ ಶ್ರೀ ಮಠಕ್ಕೆ ಭೇಟಿ ನೀಡಿದ ಅವರು, ಶ್ರೀಗಳ ಗದ್ದುಗೆ ಎದುರು ಪ್ರಾರ್ಥನೆ ಸಲ್ಲಿಸಿದರು.ಇದೇ ವೇಳೆ ಕಣ್ಣೋರ್ ಮಠದ ಸ್ವಾಮೀಜಿ ಸಹ ಹಾಜರಿದ್ದರು.ತುಮಕೂರಿನಿಂದ ಮಾಜಿ ಪ್ರಧಾನಿ,ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ಸ್ಪರ್ಧಿಸಿರುವುದು ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

        ಈಗಾಗಲೇ ಜನರಲ್ಲಿ ಗೆಲುವು-ಸೋಲಿನ ಲೆಕ್ಕಾಚಾರವೂ ನಡೆಯುತ್ತಿದೆ. ತುಮಕೂರಿನ ಹಲವೆಡೆ ಪ್ರಚಾರ ನಡೆಸಿರುವ ದೇವೇಗೌಡರು ಗೆಲವಿನ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಈ ಮಧ್ಯೆ ಕುಟುಂಬದವರು ಅವರು ಗೆಲುವಿಗಾಗಿ ಶ್ರಮಿಸುತ್ತಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here