ರಾಜ್ಯ ಮಟ್ಟದ ಯುವಜನೋತ್ಸವ ಆಯೋಜನೆಯ ಪೂರ್ವಭಾವಿ ಸಭೆ

0
34

 ತುಮಕೂರು

       ಜಿಲ್ಲಾಧಿಕಾರಿಗಳ ಕಚೇರಿಯಲ್ಲಿಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಮಟ್ಟದ ಯುವಜನೋತ್ಸವ ಆಯೋಜಿಸುವ ಕುರಿತು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ಸಂಸದರಾದ ಎಸ್.ಪಿ.ಮುದ್ದಹನುಮೇಗೌಡ , ಇಲಾಖೆಯ ನಿರ್ದೇಶಕ ಶ್ರೀನಿವಾಸ್, ಡಿ.ಸಿ., ಸಿಇಒ, ಎಸ್ಪಿ, ಎಡಿಸಿ, ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಹಾಜರಿದ್ದರು.

         ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಉಪಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ಯುವಜನೋತ್ಸವ ಕೇವಲ ಸ್ಪರ್ಧೆ ಗೆ ಸೀಮಿತವಾಗಬಾರದು. ತುಮಕೂರು ನಗರದಲ್ಲಿ ಉತ್ಸವ ದ ರೀತಿಯಲ್ಲಿ ನಡೆಯಬೇಕು ಎಂದರು.

          ಕಳೆದ ಬಾರಿ ಉಡುಪಿ ಜಿಲ್ಲೆಯಲ್ಲಿ ಜರುಗಿದ್ದು,, ಉಡುಪಿ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಕ್ಕಿಂತ ವಿಭಿನ್ನ ವಾಗಿ ಉತ್ಸವದ ರೀತಿಯಲ್ಲಿ ಈ ಬಾರಿ ನಮ್ಮ ಜಿಲ್ಲೆಯಲ್ಲಿ ಸಂಘಟಿಸ ಬೇಕು. ಪ್ರತಿ ಜಿಲ್ಲೆಯಿಂದ 57 ಸ್ಪರ್ಧಾಳು ಗಳಂತೆ 1710 ಮಂದಿ ಭಾಗವಹಿಸುತ್ತಿದ್ದು, ನವೆಂಬರ್ 23, 24, ಮತ್ತು 25 ರಂದು ಮೂರು ದಿನಗಳ ಕಾಲ ಯುವಜನೋತ್ಸವವನ್ನು ವಿಭಿನ್ನ, ವರ್ಣರಂಜಿತವಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

          ಭಾರತೀಯ ಶಾಸ್ತ್ರೀಯ ಕಲೆಗಳನ್ನು ಯುವಜನರಲ್ಲಿ ಪ್ರೋತ್ಸಾಹಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಜಿಲ್ಲೆಯಲ್ಲಿರುವ ವಿದ್ಯಾರ್ಥಿ ಸಮುದಾಯವನ್ನು ಇದಕ್ಕೆ ತೊಡಗಿಸಿಕೊಳ್ಳಬೇಕು. ಯುವ ಜನೋತ್ಸವದಲ್ಲಿ ಭಾಗವಹಿಸಲು ಆಗಮಿಸುವ ಸ್ಪರ್ಧಾಳುಗಳಿಗೆ ಉತ್ತಮ ವಸತಿ, ಗುಣಮಟ್ಟದ ಆಹಾರ ಸೇರಿದಂತೆ ವಿವಿಧಸೌಲಭ್ಯ ಗಳನ್ನು ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

         ಆ ಮೂರು ದಿನಗಳ ಕಾಲ ತುಮಕೂರು ನಗರದಲ್ಲಿ ಹಬ್ಬದ ವಾತಾವರಣವಿರಬೇಕು. ಯುವಜನೋತ್ಸವಕ್ಕೆ ವ್ಯಾಪಕ ಪ್ರಚಾರ ನೀಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಬೇಕು. ಯುವಜನೋತ್ಸವದಲ್ಲಿ ನಡೆಯುವ ಜಾನಪದ ನೃತ್ಯ, ಹಾಡು, ಎಕಾಂಕ ನಾಟಕ,ಮತ್ತಿತರ ಸ್ಪರ್ಧೆಗಳ ಜೊತೆಗೆ ಪ್ರಖ್ಯಾತ ಕಲಾವಿದರಿಂದ ಭರತನಾಟ್ಯ, ಕಥಕ್ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಸೂಚಿಸಿದರು.

         ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದರಾದ ಎಸ್.ಪಿ.ಮುದ್ದಹನುಮೇಗೌಡ ಅವರು, ತುಮಕೂರು ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಒಂದೊಂದು ರೀತಿಯ ಕಲಾಪ್ರಕಾರವಿದೆ. ಈ ಕಲಾವಿದರಿಂದಲೂ ಪ್ರದರ್ಶನ ಏರ್ಪಡಿಸಬಹುದು ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

LEAVE A REPLY

Please enter your comment!
Please enter your name here