ಮಹಿಳೆಯರ ವ್ಯಕ್ತಿತ್ವ ಮತ್ತು ಅಸ್ತಿತ್ವಕ್ಕೆ ಧಕ್ಕೆ ಬಂದಾಗ ಕಾನೂನಿನ ರಕ್ಷಣೆ ಪಡೆಯಬೇಕು

ಹಾವೇರಿ

       ಇಂದು ಮಹಿಳೆಯರಿಗಾಗಿ ಅನೇಕ ಕಾನೂನುಗಳನ್ನು ಜಾರಿಗೆ ತರಲಾಗಿದೆ. ಈ ಕಾನೂನುಗಳ ಕುರಿತು ಹೆಣ್ಣು ಮಕ್ಕಳಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ. ಮಹಿಳೆಯರು ತನ್ನ ವ್ಯಕ್ತಿತ್ವ ಮತ್ತು ಅಸ್ತಿತ್ವಕ್ಕೆ ಧಕ್ಕೆ ಬರುವ ಸಂದರ್ಭದಲ್ಲಿ ಕಾನೂನುಗಳ ಮೂಲಕ ರಕ್ಷಣೆ ಪಡೆಯಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಎಸ್.ಎಚ್. ರೇಣುಕಾದೇವಿ ಅವರು ಹೇಳಿದರು.

         ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ನಗರದ ಎಸ್.ಜೆ.ಎಂ.ಪದವಿ ಪೂರ್ವ ಕಾಲೇಜು ಸಭಾಭವನದಲ್ಲಿ ಜರುಗಿದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

       ಹಿಂದಿನ ಕಾಲದಲ್ಲಿ ಮನೆಯ ನಾಲ್ಕು ಗೋಡೆಗಳ ಮಧ್ಯ ಜೀವನ ನಡೆಸುತ್ತಿದ್ದ ಮಹಿಳೆ ಶಿಕ್ಷಣ ಮತ್ತು ಇತರ ಎಲ್ಲಾ ಸೌಲಭ್ಯಗಳಿಂದ ವಂಚಿತಳಾಗಿದ್ದಳು. ಇಂದು ಮಹಿಳೆ ನಾಲ್ಕು ಗೋಡೆಗಳಿಂದ ಹೊರ ಬಂದು ಶಿಕ್ಷಣ ಪಡೆದು ಸುಶಿಕ್ಷತಳಾಗಿ ಎಲ್ಲಾ ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಜೀವನ ನಡೆಸುತ್ತಿದ್ದಾಳೆ. ನಿಮ್ಮನ್ನು ತಂದೆ-ತಾಯಿ ಕಷ್ಟಪಟ್ಟು ಕಾಲೇಜಿಗೆ ಕಳುಹಿಸುತ್ತಾರೆ. ನೀವು ಉತ್ತಮ ಶಿಕ್ಷಣ ಪಡೆದು ಸುಸಂಸ್ಕತರಾಗಿ ಉತ್ತಮ ಉದ್ಯೋಗ ಪಡೆದು ಒಳ್ಳೆಯ ಹೆಸರು ತನ್ನಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

      ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯಕಾರ್ಯದರ್ಶಿಗಳು ಹಾಗೂ ನ್ಯಾಯಾಧೀಶರಾದ ಶ್ರೀಮತಿ ವೈ.ಎಲ್.ಲಾಡಖಾನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕಾನೂನು ಎಲ್ಲರಿಗೂ ಸಮಾನವಾಗಿ ಅನ್ವಯಿಸುತ್ತದೆ. ಅಪರಾಧ ಅರಿಯದೇ ಮಾಡಿದ ಅಪರಾಧಕ್ಕೆ ಆತನಿಕೆ ಕ್ಷಮೆ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ. ರಾಷ್ಟ್ರದ ಕಾನೂನುಗಳನ್ನು ಪ್ರತಿಯೊಬ್ಬ ವ್ಯಕ್ತಿಯೂ ಪಾಲಿಸಬೇಕು. ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಮೂಲಕ ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಿರುವ ಕಾನೂನಿನ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಜಿ.ಗೋವಿಂದಸ್ವಾಮಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ಯಾನಲ್ ವಕೀಲರಾದ ಕುಮಾರಿ ರಾಜೇಶ್ವರಿ ಚಕ್ಕಳ್ಳೇರ ಹಾಗೂ ಎನ್.ಜಿ.ಓ.ದ ಮುತ್ತುರಾಜ ಮಾದರ, ಪೊಲೀಸ್ ಇಲಾಖೆಯ ಎಸ್.ಡಿ.ಸಾಗರ ವಿಶೇಷ ಉಪನ್ಯಾಸ ನೀಡಿದರು.

      ತರಬೇತಿ ದಿವಾಣಿ ನ್ಯಾಯಾಧೀಶರಾದ ಹರೀಶ ಜಿ., ಹರೀಶ ಕೆ.ಎಂ., ವಕೀಲರ ಸಂಘದ ಅಧ್ಯಕ್ಷ ಅಶೋಕ ಸಿ.ನೀರಲಗಿ, ಕಾರ್ಯದರ್ಶಿ ದೇವರಾಜ ಎನ್.ನಾಯ್ಡು ಇತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap