ಶಾಸಕರ ಅನರ್ಹತೆ: ದೂರು ಹಿಂಪಡೆಯುವ ಮಾತೆ ಇಲ್ಲ…!!!

ದೇವದುರ್ಗ         

         ಕಾಂಗ್ರೆಸ್‌ನ ಅತೃಪ್ತರನ್ನು ಅನರ್ಹಗೊಳಿಸುವಂತೆ ವಿಧಾನಸಭೆ ಅಧ್ಯಕ್ಷರಿಗೆ ಸಲ್ಲಿಸಿರುವ ಮನವಿಯನ್ನು ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಿಳಿಸಿದ್ದಾರೆ.

       ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪಕ್ಷದ ಶಿಸ್ತು ಉಲ್ಲಂಘಿಸಿದ ನಾಲ್ವರು ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಈಗಾಗಲೇ ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದು, ಈ ಕುರಿತು ವಿಧಾನಸಭೆ ಅಧ್ಯಕ್ಷರು ನಿರ್ಣಯ ಕೈಗೊಳ್ಳಬೇಕಿದೆ. ಅವರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಅವರ ವಿವೇಚನೆಗೆ ಬಿಟ್ಟವಿಚಾರ ಎಂದರು.

      ಬಿಡುಗಡೆಯಾಗಿರುವ ಆಡಿಯೋ ಟೇಪ್ ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ ಎನ್ನಲಾದ ಆಪರೇಶನ್‌ ಕಮಲ ಕಾರ್ಯಾಚರಣೆಗೆ ಸಾಕ್ಷಿಯಾಗಿದೆ.ಮೊದ ಮೊದಲು ಧ್ವನಿ ನಂದಲ್ಲ ಎಂದು ಬಿಎಸ್‌ವೈ ಹೇಳಿದ್ದರು. ಆದರೆ, ನಂತರ ಧ್ವನಿ ನನ್ನದೇ ಎಂದು ಒಪ್ಪಿಕೊಂಡಿದ್ದರು, ಆಪರೇಷನ್ ನ  ಆಡಿಯೋವನ್ನು ಎಡಿಟ್‌ ಮಾಡಿದ್ದಾಲಾಗಿಇದೆ ಎಂದು ಹೇಳಿದ್ದಾರೆ. ಹೀಗಾಗಿ ಆಡಿಯೋದ ಅರ್ಧ ಸತ್ಯ ಗೊತ್ತಾಗಿದೆ. ಇನ್ನುಳಿದ ಅರ್ಧ ಸತ್ಯ ಎಸ್‌ಐಟಿ ತನಿಖೆಯಿಂದ ಹೊರಬರುತ್ತದೆ ಎಂದು ತಿಳಿಸಿದರು.

       ಆಡಿಯೋ ಪ್ರಕರಣ ಸದನ, ನ್ಯಾಯಾಂಗ ತನಿಖೆ ಮಾಡಲು ಬರುವುದಿಲ್ಲ. ನಿಯಮಾನುಸಾರ ಪೊಲೀಸ್‌, ಎಸ್‌ಐಟಿ ಇಲ್ಲವೇ ಸಿಬಿಐನಿಂದ ಮಾತ್ರ ತನಿಖೆಯಾಗಬೇಕಾಗುತ್ತದೆ. ಕಾನೂನು ಗೊತ್ತಿದ್ದರೂ ಬಿಜೆಪಿಯವರು ಅಡ್ಡಿಪಡಿಸಿದರು. ಎಸ್‌ಐಟಿಗೆ ಅಧಿಕಾರ ನೇಮಕ ಮಾಡುವಲ್ಲಿ ವಿಳಂಬ ಎಂಬುದೇನೂ ಇಲ್ಲ. ಸರ್ಕಾರ ನಿರ್ಧಾರ ಕೈಗೊಂಡ ಮೇಲೆ ತಂಡ ರಚನೆ ಮಾಡಿಯೇ ಮಾಡುತ್ತೆ. ತನಿಖೆಯಿಂದ ಸತ್ಯ ಹೊರಬಂದೇ ಬರುತ್ತೆ ಎಂದರು.

        ಈ ಆಡಿಯೋದಲ್ಲಿ ಲಂಚದ ಆಮಿಷ ಇದೆ. ಗೌರವಾನ್ವಿತ ಹುದ್ದೆಗಳಾದ ಸ್ಪೀಕರ್‌, ನ್ಯಾಯಾಧೀಶರಿಗೂ ಲಂಚ ಕೊಡುತ್ತೇವೆ ಎಂಬ ಮಾತುಗಳಿವೆ. ಹೀಗಾಗಿ ತನಿಖೆಯನ್ನು ಎಸ್‌ಐಟಿಗೆ ವಹಿಸಿರುವುದೇ ಸೂಕ್ತ ಮತ್ತು ಕಾನೂನು ಬದ್ಧ. ಗುರುಮಟಕಲ್‌ ಶಾಸಕರ ಪುತ್ರ ಶರಣಗೌಡರಿಗೆ ಬಲವಂತದಿಂದ ಬರಲು ಹೇಳಿದ್ದಾರೆ. ಪಕ್ಷ ತೊರೆಯಲು ಹಣ ಮತ್ತು ಅಧಿಕಾರದ ಆಮಿಷ ಒಡ್ಡಿದ್ದಾರೆ.

           ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap