ತಾ.ಪಂ. ಗುತ್ತಿಗೆ ಕೆಲಸಗಾರ್ತಿ ಆತ್ಮಹತ್ಯೆ

0
78

ತಿಪಟೂರು

        ನಗರದ ತಾಲ್ಲೂಕು ಪಂಚಾಯಿತಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಿವ್ಯ (24) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

        ಸಂಜೆ 5.00 ಗಂಟೆ ಸುಮಾರಿನಲ್ಲಿ ತಾಲ್ಲೂಕು ಪಂಚಾಯಿತಿ ಆವರಣದ ಶೌಚಾಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೃತಳಿಗೆ 4 ವರ್ಷದ ಹಿಂದೆ ವಿವಾಹವಾಗಿದ್ದು 2 ವರ್ಷದ ಗಂಡು ಮಗುವಿದ್ದು, ತುಮಕೂರಿನ ಕುಣಿಗಲ್ ರಸ್ತೆಯಲ್ಲಿ ವಾಸವಾಗಿದ್ದಾರೆಂದು ತಿಳಿದುಬಂದಿದೆ. ಸದ್ಯಕ್ಕೆ ತಿಪಟೂರು ತಾಲ್ಲೂಕು ಪಂಚಾಯಿತಿಯಲ್ಲಿ ಎನ್.ಆರ್.ಐ.ಜೆ ನಲ್ಲಿ ಕೃಷಿ ಇಲಾಖೆಯ ಆಪರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಸಾಯುವ ಮುನ್ನ ಗೋಡೆಯಮೇಲೆ “ನನ್ನ ಮಗು” ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದ್ದಿತಿಳಿದ ತಕ್ಷಣ ಉಪವಿಭಾಗಾಧಿಕಾರಿ ಪೂವಿತ, ತಾ.ಪಂ ಈ.ಓ ಮದನ್‍ಮೋಹನ್, ದಂಡಾಧಿಕಾರಿ ಡಾ. ಮಂಜುನಾಥ್ ಸ್ಥಳಕ್ಕಾಗಮಿಸಿದರು. ಪ್ರಕರಣ ನಗರಠಾಣೆಯಲ್ಲಿ ದಾಖಲಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here