ಎಲ್ಲಾ ಶಾಸಕರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಾಗುವುದಿಲ್ಲ:ಹೆಚ್.ಕೆ.ಪಾಟೀಲ್

ಬೆಂಗಳೂರು

       ಸಚಿವ ಸಂಪುಟದಲ್ಲಿ ಕೇವಲ 33 ಸ್ಥಾನಗಲಿದ್ದು ಎಲ್ಲ ಶಾಸಕರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಾಗುವುದಿಲ್ಲವಾದ್ದರಿಂದ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲವೆಂಬ ಅಸಮಾಧಾನವು ಇಲ್ಲ ಬೇಸರವೂ ತಮಗಿಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸಚಿವ ಸ್ಥಾನ ಕೈತಪ್ಪಿದ್ದಕ್ಕಾಗಿ ಸಮಾಧಾನಗೊಳಿಸಲು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನ ತಮಗೆ ನೀಡಿಲ್ಲ.ಇಷ್ಟಕ್ಕು ಸಚಿವ ಸ್ಥಾನಕ್ಕಿಂತ ಉನ್ನತ ಸ್ಥಾನ ಇದಾಗಿದೆ.ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಂಘಟಿಸುವ ಹಾಗು ಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಲು ರಣತಂತ್ರ ರೂಪಿಸುವ ಮಹತ್ವದ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಇದಕ್ಕಾಗಿ ಎಐಸಿಸಿ ಅಧ್ಯಕ್ಷರಿಗೆ ತಾವು ಕೃತಜ್ಞರಾಗಿವುದಾಗಿ ಹೆಚ್.ಕೆ.ಪಾಟೀಲ್ ತಿಳಿಸಿದರು.

      ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸರ್ಕಾರದ ಸಾಧನೆಗಳು, ಮೈತ್ರಿ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲಾಗುವುದು.

       ಮೈತ್ರಿ ಸರ್ಕಾರದಲ್ಲಿ ಕಂಡು ಬರುತ್ತಿರುವ ಕೆಲವು ಗೊಂದಲಗಳ ಲೋಕಸಭಾ ಚುನಾವಣೆ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ.ಪಕ್ಷದಲ್ಲಿ ಮತ್ತು ಸರ್ಕಾರದ ಮಟ್ಟದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿವೆ

       ಅವುಗಳನ್ನು ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ.ಪಕ್ಷದ ಅಧ್ಯಕ್ಷರಾದ ರಾಹುಲ್ ಗಾಂಧಿ ,ದೇವೇಗೌಡರು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುತ್ತಾರೆಂದು ಹೆಚ್.ಕೆ.ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

       ಕಳೆದ ವಿಧಾನ ಸಭೆ ಹಾಗು ಲೋಕಸಭೆ ಉಪ ಚುನಾವಣೆಯಲ್ಲಿ ಒಟ್ಟಾಗಿಯೇ ಪ್ರಚಾರ ಮಾಡಿದ್ದೇವೆ ,ಮುಂದಿನ ಲೋಕಸಭಾ ಚುನಾವಣೆಗೂ ಇದೇ ತಂತ್ರವನ್ನು ಅನುರಿಸುತ್ತೇವೆ. ಸೀಟು ಹಂಚಿಕೆಯಲ್ಲು ಅಸಮಾಧಾನವಿಲ್ಲ,ಸ್ಥಳೀಯ ಮಟ್ಟದಲ್ಲಿ ಪಕ್ಷದ ಸ್ಥಿತಿಗತಿ ಆಧರಿಸಿ ಮಾತುಕತೆ ಮೂಲಕ ಸ್ಥಾನ ಹಂಚಿಕೆ ನಡೆಯಲಿದೆ.ಇದರಲ್ಲಿ ಯಾವುದೇ ಗೊಂದಗಳಿಲ್ಲಿವೆಂದು ಅಧ್ಯಕ್ಷ ಹೆಚ್.ಕೆ.ಪಾಟೀಲ್ ತಿಳಿಸಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap