ಉದ್ಯೋಗಾಕಾಂಕ್ಷಿಗಳ ತರಬೇತಿ ಶಿಬಿರ

0
10

ಚಳ್ಳಕೆರೆ

      ಪ್ರತಿನಿತ್ಯ ಯುವ ಜನಾಂಗ ಎದುರಿಸುವ ಹಲವಾರು ಜ್ವಲಂತ ಸಮಸ್ಯೆಗಳಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖವಾಗಿದ್ದು, ನಿರುದ್ಯೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರ ಬೃಹತ್ ಉದ್ಯೋಗ ಮೇಳದ ಮೂಲಕ ಉದ್ಯೋಗವನ್ನು ಕಲ್ಪಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದು, ಯುವಕರು ಹಾಗೂ ವಿದ್ಯಾರ್ಥಿಗಳು ಉದ್ಯೋಗ ಮೇಳದ ತರಬೇತಿ ಶಿಬಿರದಲ್ಲಿ ಭಾಗವಹಿಸಿ ಮಾಹಿತಿಯನ್ನು ಪಡೆದು ಉತ್ತಮ ಉದ್ಯೋಗವನ್ನು ಪಡೆಯಬೇಕೆಂದು ಕೃಷಿ ಇಲಾಖೆಯ ಉಪನಿರ್ದೇಶಕಿ ಡಾ.ಎಚ್.ಸುಜಾತರೆಡ್ಡಿ ತಿಳಿಸಿದರು.

    ಅವರು, ಸೋಮವಾರ ಇಲ್ಲಿನ ಎಚ್‍ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗಾಕಾಂಕ್ಷಿಗಳ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಸರ್ಕಾರ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳುವ ಮೂಲಕ ನಿರುದ್ಯೋಗಿ ಯುವಕರು ಉದ್ಯೋಗವನ್ನು ಪಡೆಯಲು ಇಂತಹ ತರಬೇತಿ ಕಾರ್ಯಗಾರವನ್ನು ಆಯೋಜಿಸುತ್ತಿದೆ. ವಿಶೇಷವಾಗಿ ಎಸ್‍ಎಸ್‍ಎಲ್‍ಸಿ, ಪದವಿ ಪೂರ್ವ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಅಭ್ಯಾಸವನ್ನು ಮುಗಿಸಿದ ನಂತರ ಮುಂದಿನ ಹೆಜ್ಜೆ ಉದ್ಯೋಗವನ್ನು ಪಡೆಯುವುದಾಗಿದೆ. ಈ ನಿಟ್ಟಿನಲ್ಲಿ ಇಂತಹ ತರಬೇತಿಗಳು ನಿಮಗೆ ಸಾಕಷ್ಟು ಮಾಹಿತಿಯನ್ನು ನೀಡುತ್ತವೆ ಎಂದರು.

      ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಈಶ್ವರಪ್ರಸಾದ್ ಮಾತನಾಡಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲಾ ವ್ಯಾಪ್ತಿಗಳ ಬೃಹತ್ ಉದ್ಯೋಗ ಮೇಳ ಫೆ.16 ಮತ್ತು 17 ಎರಡು ದಿನಗಳ ಕಾಲ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದು, ಈ ಮೇಳದಲ್ಲಿ ಇಲ್ಲಿನ ವಿದ್ಯಾರ್ಥಿಗಳು ಹಾಗೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಿದೆ.

      7ನೇ ತರಗತಿಯಿಂದ ಸ್ನಾತಕೋತ್ತರ ಪದವಿ ತನಕದ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಲು ಆರ್ಹರಿದ್ದಾರೆ. ಉದ್ಯೋಗ ಮೇಳವನ್ನು ಯಶಸ್ಸಿಗೊಳಿಸುವ ನಿಟ್ಟಿನಲ್ಲಿ ಈ ತಾಲ್ಲೂಕಿನ ಹೆಚ್ಚಿನ ಯುವಕ ಯುವತಿಯರು ಮೇಳದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಪ್ರೊ.ಎಂ.ಶಿವಲಿಂಗಪ್ಪ, ನಗರಸಭೆಯ ಸಮನ್ವಯಾಧಿಕಾರಿ ಪಿ.ಪಾಲಯ್ಯ ಮುಂತಾದವರು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here