ತಾ.ಪಂ ನಲ್ಲಿ ವಿಶ್ವ ಜಲ ದಿಣಾಚರಣೆ

ಹಾವೇರಿ:

         ದಿನಾಂಕ:22-03-2019 ವಿಶ್ವ ನೀರಿನ (ಜಲಾಮೃತ-2019) ದಿನಾಚರಣೆ ಕಾರ್ಯಕ್ರಮವನ್ನು ಹಾವೇರಿ ತಾಲೂಕ ಪಂಚಾಯತ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲ್ಲೂಕ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂಧಿ ವರ್ಗದವರು ಭಾಗವಹಿಸಿ ಸಸಿ ನೆಟ್ಟು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.

        ಹಾಗೆಯೇ ಮುಂದುವರೆದು ಕಾರ್ಯಕ್ರಮವನ್ನು ಉದ್ದೇಶಿಸಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಅನ್ನಪೂರ್ಣ ಮುದಕಮ್ಮನವರ ಮಾತನಾಡಿ ಜಲಾಮೃತ ಕಾರ್ಯಕ್ರಮದ ಅಂಗವಾಗಿ ಜನರಿಗೆ ನೀರಿನ ಬಗ್ಗೆ ಅರಿವು ಮೂಡಿಸಲು ಜಲ ಸಾಕ್ಷರತೆ, ಜಲ ಸಂರಕ್ಷಣೆ, ಜಲ ಪ್ರಜ್ಞೆ ಹಾಗೂ ಹಸಿರೀಕರಣ ಎಂಬ ನಾಲ್ಕು ಅಂಶ ಪರಿಚಯಿಸಲಾಗುತ್ತಿದೆ. ನೀರನ್ನು ಮಿತವಾಗಿ ಬಳಸಿ ನಾಳೆಗೂ ಉಳಿಸಿ, ನೀರು ಅಮೃತ, ನೀರಿನ ಜವ್ಬಾರಿ ನನ್ನದು, ಸರ್ವರಿಗೂ ಜಲ ಸದಾಕಾಲ ಎಂಬ ಘೋಷವಾಕ್ಯಗಳ ಮೂಲಕ ಜನರಿಗೆ ನೀರಿನ ಬಳಕೆ ಮತ್ತು ಮಹತ್ವ ಹಾಗೂ ಮುಂದಿನ ಪೀಳಿಗೆಗೆ ನೀರು ಉಳಿಸಬೇಕು ಎನ್ನುವುದರ ಬಗ್ಗೆ ಕಾರ್ಯಕ್ರಮದಲ್ಲಿ ತಿಳಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap