ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚಿನ ಸಂಖ್ಯೆಯ ಪೊಲೀಸ್ ನಿಯೋಜನೆ.

ಚಳ್ಳಕೆರೆ

       ಏ.18ರಂದು ನಡೆಯುವ ಲೋಕಸಭಾ ಚುನಾವಣೆಯ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮತದಾನ ಪ್ರಕ್ರಿಯೆಗೆ ಯಾವುದೇ ಅಡ್ಡಿ ಉಂಟಾಗದಂತೆ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಪೊಲೀಸ್ ಹಾಗೂ ಅರೆ ಸೇನಾ ಪಡೆಯನ್ನು ನಿಯೋಜಿಸಿದ್ದು, ಶಾಂತಿಯುತ ಚುನಾವಣೆ ಎಲ್ಲರೂ ಸಹಕರಿಸಬೇಕೆಂದು ಉಪವಿಭಾಗದ ಡಿವೈಎಸ್ಪಿ ಎಸ್.ರೋಷನ್ ಜಮೀರ್ ತಿಳಿಸಿದರು.

       ಅವರು, ಬುಧವಾರ ಪತ್ರಿಕೆಯೊಂದಿಗೆ ಮಾತನಾಡುತ್ತಾ, ಏ.18ರ ಲೋಕಸಭಾ ಚುನಾವಣೆಗೆ ಮತದಾನಕ್ಕೆ ಸಂಬಂಧಪಟ್ಟಂತೆ ಕ್ಷೇತ್ರದ ವಿವಿಧ ಮತಗಟ್ಟೆ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಾಗ್ರತೆ ವಹಿಸಲು ಈಗಾಗಲೇ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗೆ ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

         ವೃತ್ತ ನಿರೀಕ್ಷ ಎನ್.ತಿಮ್ಮಣ್ಣ ಮಾತನಾಡಿ, ಕ್ಷೇತ್ರ ವ್ಯಾಪ್ತಿಯ 73 ಸೂಕ್ಷ್ಮ ಮತಗಟ್ಟೆ, 40 ಅತಿ ಸೂಕ್ಷ್ಮ ಮತಗಟ್ಟೆ ಕೇಂದ್ರ, ಒಟ್ಟು 113 ಮತಗಟ್ಟೆ ಕೇಂದ್ರಗಳಿದ್ದು ಎಲ್ಲಾ ಕೇಂದ್ರಗಳಿಗೂ ವಿಶೇಷ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಒಟ್ಟು 16 ಮೊಬೈಲ್ ಸ್ವಾಡನ್ನು ಸಿದ್ದ ಪಡಿಸಿದ್ದು ಯಾವುದೇ ಗಲಬೆ ನಡೆದಲ್ಲಿ ಕೂಡಲೇ ಸ್ಥಳಕ್ಕೆ ದಾವಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಾರಿಯ ಲೋಕಸಭಾ ಚುನಾವಣೆಗೆ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾವುದೇ ರೀತಿಯ ಘಟನೆಗಳು ಸಂಭವಿಸಿದಲ್ಲಿ ಕೆಲವೇ ನಿಮಿಷಗಳಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿ ಸ್ಥಳದಲ್ಲಿದ್ದು, ಗಲಭೆಯನ್ನು ನಿಯಂತ್ರಿಸಲಿದ್ಧಾರೆ.

       ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಡಿವೈಎಸ್ಪಿ-1, ವೃತ್ತ ನಿರೀಕ್ಷಕರು-5, ಪಿಎಸ್‍ಐ-7, ಎಎಸ್‍ಐ-23, ಮುಖ್ಯ ಪೇದೆ-60, ಪೇದೆಗಳು-228, ಗೃಹರಕ್ಷಕ ದಳ-134, ಸಿಐಎಸ್‍ಎಫ್ ಪಡೆ 38 ಪೊಲೀಸ್ ಸಿಬ್ಬಂದಿ ಚುನಾವಣಾ ಕರ್ತವ್ಯವನ್ನು ನಿರ್ವಹಿಸಲಿದ್ಧಾರೆ. ಅಲ್ಲದೆ ಮೂರು ಡಿಎಆರ್ ವಾಹನ, ಒಂದು ಕೆಎಸ್‍ಆರ್‍ಪಿ ವಾಹನವೂ ಸಹ ಕಾರ್ಯನಿರ್ವಹಿಸಲಿದ್ದು, ಒಟ್ಟು ಕ್ಷೇತ್ರ ವ್ಯಾಪ್ತಿಯಲ್ಲಿ 16 ಮೊಬೈಲ್ ಸ್ವಾಡ್‍ಗಳನ್ನು ನೇಮಿಸಲಾಗಿದೆ ಎಂದಿದ್ಧಾರೆ.

       ಏ.18ರಂದು ನಡೆಯುವ ಮತದಾನದಲ್ಲಿ ಸಾರ್ವಜನಿಕರು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆಯೊಂದಿಗೆ ಸಹಕಾರ ನೀಡಬೇಕಿದೆ. ಯಾವುದೇ ರೀತಿಯ ಹಲ್ಲೆ ಮತ್ತು ದೌರ್ಜನ್ಯ ಪ್ರಕರಣಗಳು ನಡೆಯದಂತೆ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನೇಮಿಸಲಾಗಿದ್ದು, ಸಾರ್ವಜನಿಕರು ಸಹ ಸಣ್ಣ, ಪಟ್ಟ ವಿಚಾರಗಳಿಗೆ ಅನಗತ್ಯವಾಗಿ ವಿವಾದ ಉಂಟು ಮಾಡದಂತೆ ಯಾವುದೇ ಸಮಸ್ಯೆ ಇದ್ದಲ್ಲಿ ನೇರವಾಗಿ ತಿಳಿಸಿ ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದ್ಧಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap