7 ಮಂದಿ ನ್ಯಾಯಾಧೀಶರು ಹಾಗೂ ಐವರು ಹೆಚ್ಚುವರಿ ನ್ಯಾಯಾಧೀಶರ ಪ್ರಮಾನ ವಚನ

0
12

ಬೆಂಗಳೂರು

          ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಾಧೀಶರಾಗಿ 7 ಮಂದಿ ಹಾಗೂ ಹೆಚ್ಚುವರಿ ನ್ಯಾಯಾಧೀಶರಾಗಿ ಐವರು ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.

           ರಾಜ್ಯ ಉಚ್ಛನ್ಯಾಯಾಲಯದಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿದ್ದ ಕೆಂಪಯ್ಯ ಸೋಮಶೇಖರ್, ಕೊಟ್ರವ್ವ ಸೋಮಪ್ಪ ಮುದುಗಲ್, ಶ್ರೀನಿವಾಸ್ ಹರೀಶ್‍ಕುಮಾರ್, ಜಾನ್ ಮೈಕೇಲ್ ಕುನ್ನಾ, ಬಸವರಾಜ್ ಅಂದಾನಗೌಡ ಪಾಟೀಲ್, ನಂಗಲಿ ಕೃಷ್ಣರಾವ್ ಸುಧೀಂದ್ರ ರಾವ್ ಮತ್ತು ಹೊಸೂರು ಭುಜಂಗರಾಯ ಪ್ರಭಾಕರ್ ಶಾಸ್ತ್ರೀ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು.

         ಅಶೋಕ್ ಗೋಲಪ್ಪ ನಿಜಗಣ್ಣನವರ್, ಹೇತೂರ್ ಪುಟ್ಟಸ್ವಾಮಿ ಗೌಡ ಸಂದೇಶ್, ಕೃಷ್ಣನ್ ನಟರಾಜನ್, ಪ್ರಹ್ಲಾದರಾವ್ ಗೋವಿಂದರಾವ್ ಮುತಾಲಿಕ್ ಪಾಟೀಲ್ ಮತ್ತು ಅಪ್ಪಾಸಾಹೇಬ್ ಶಾಂತ್ಪ ಬೆಳ್ಳುಂಕೆ ಅವರು ಹೆಚ್ಚುವರಿ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು.

         ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ ವಾಜೂಬಾಯಿ ವಾಲ ಅವರು, ನೂತನ ನ್ಯಾಯಾಧೀಶರಿಗೆ ಪ್ರಮಾಣವಚನ ಬೋಧಿಸಿದರು.

         ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣಭೈರೇಗೌಡ, ಉಚ್ಛನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ಅನೇಕ ನ್ಯಾಯಾಧೀಶರು, ವಕೀಲರು, ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

LEAVE A REPLY

Please enter your comment!
Please enter your name here