ಪರಭಾಷೆಯ ಶಿಕ್ಷಣ ಮಕ್ಕಳನ್ನು ಬಾಯಿಪಾಠಮಾಡುವ ಗಿಳಿಗಳನ್ನಾಗಿಸಿದೆ : ಚಂದ್ರಶೇಖರ ಕಂಬಾರ

0
11

ಬೆಂಗಳೂರು

        ಪರಭಾಷೆಯ ಮೂಲಕದ ಶಿಕ್ಷಣ ನಮ್ಮ ಮಕ್ಕಳ ಬುದ್ಧಿ ಶಕ್ತಿಯನ್ನು ಬೆಂಡುಮಾಡಿದೆ, ಅವರ ನರಗಳನ್ನು ದುರ್ಬಲಗೊಳಿಸಿದೆ, ಅವರನ್ನು ಬಾಯಿಪಾಠಮಾಡುವ ಗಿಳಿಗಳನ್ನಾಗಿಸಿದೆ ಎಂದು 84ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಚಂದ್ರಶೇಖರ ಕಂಬಾರ ಕಳವಳ ವ್ಯಕ್ತಪಡಿಸಿದ್ದಾರೆ.

        ಒಂದು ರಾಜ್ಯದ ಭಾಷೆ, ಸಂಸ್ಕತಿ, ಪರಂಪರೆಗಳನ್ನು ಸಂರಕ್ಷಿಸುವ ಜವಾಬ್ದಾರಿ ಸರ್ಕಾರದ್ದು. ಇದನ್ನರಿತು ತನ್ನ ರಾಜ್ಯದ ಪ್ರಜೆಗಳಿಗೆ ಎಂಥ ಶಿಕ್ಷಣ ಕೊಡಬೇಕೆಂದು ನಿರ್ಧರಿಸುವ ಕರ್ತವ್ಯ ಮತ್ತು ಅಧಿಕಾರ ಸರಕಾರದ ಕೆಲಸ ಎಂದು ಹೇಳಿದ್ದಾರೆ.ಕನ್ನಡವೇ ನಮ್ಮೆಲ್ಲ ದೈನಿಕ ವ್ಯವಹಾರಕ್ಕೆ, ಸಾಂಸ್ಕತಿಕ ಹಾಗೂ ಆಧ್ಯಾತ್ಮಿಕ ವಿಕಾಸಕ್ಕೆ ಬೇಕಾಗಿರುವುದಾಗಿದೆ. ಸರಕಾರವಾಗಲಿ, ಶಿಕ್ಷಣ ಮತ್ತು ಸಂಸ್ಕತಿ ಸಂಸ್ಥೆಗಳಾಗಲಿ ವ್ಯಾಪಾರ ವಾಣಿಜ್ಯ ವ್ಯವಹಾರಗಳಲ್ಲಿ ಕೂಡ ಕನ್ನಡ ಭಾಷೆಗೆ ಮೊದಲ ಆದ್ಯತೆಯ ಸ್ಥಾನ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

        ರಾಜ್ಯಭಾಷೆಯ ವಿಚಾರದಲ್ಲಿ ಎಷ್ಟು ಶ್ರಮಿಸಿದರೂ ಸಾಲದೆಂದು, ಎಷ್ಟು ಪ್ರೋತ್ಸಾಹ ಕೊಟ್ಟರೂ ಅದೆಂದಿಗೂ ಅತಿರೇಕ ಎನ್ನಿಸಿಕೊಳ್ಳಲಾರದೆಂದು ಕುವೆಂಪು ಅವರೇ ಹೇಳಿದ್ದಾರೆ ಎಂದು ಕಂಬಾರರು ಸ್ಮರಿಸಿದ್ದಾರೆ. “ಪರಭಾಷೆಯ ಮೂಲಕದ ಶಿಕ್ಷಣ ನಮ್ಮ ಮಕ್ಕಳ ಬುದ್ಧಿಶಕ್ತಿಯನ್ನು ಬೆಂಡು ಮಾಡಿದೆ. ಅವರ ನರಗಳನ್ನು ದುರ್ಬಲಗೊಳಿಸಿದೆ. ಅವರನ್ನು ಬಾಯಿಪಾಟ ಮಾಡುವ ಗಿಳಿಗಳನ್ನಾಗಿ ಮಾಡಿದೆ. ಪ್ರತಿಭಾನ್ವಿತ ಸೃಷ್ಟಿಕಾರ್ಯಕ್ಕೆ ಅನರ್ಹರನ್ನಾಗಿ ಮಾಡಿದೆ.” ಎಂಬ ಗಾಂಧೀಜಿಯ ಮಾತುಗಳನ್ನು ಪ್ರಸ್ತಾಪಿಸಿದ್ದಾರೆ. ಅಲ್ಲದೆ ಈ ದೇಶ ಸ್ವಂತಂತ್ರವಾದ ಕೂಡಲೇ ಶಿಕ್ಷಣ ಮಾಧ್ಯಮದ ಪ್ರಶ್ನೆ ಪ್ರಶ್ನೆಯಾಗಿ ಉಳಿಯುವುದಿಲ್ಲ ಎಂದೂ ಗಾಂಧೀಜಿ ಹೇಳಿದ್ದರು. ಆದರೆ ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಾದ ಮೇಲೂ ನಮ್ಮ ದೇಶದ ಶಿಕ್ಷಣದ ಸ್ಥಿತಿ ಹ್ಯಾಗಿದೆ? ಪ್ರಾಥಮಿಕ ಶಿಕ್ಷಣದ ಆರಂಭದಿಂದಲೇ ಆಂಗ್ಲ ಮಾಧ್ಯಮ ಶಾಲೆಗಳು ಸುರುವಾಗಿವೆ ಬೇಸರ ವ್ಯಕ್ತಪಡಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here