ನಗರದಲ್ಲಿ ಕೊಕೇನ್ ಮಾರಾಟ

0
4

ಬೆಂಗಳೂರು

        ಪುಟ್ಟೇನಹಳ್ಳಿಯ ಬಳಿ ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 25 ಸಾವಿರ ರೂ. ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.

        ಬಸವನಗುಡಿಯ ಮೋಹಿನ್ (28) ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನಿಂದ 2 ಗ್ರಾಂ ಕೊಕೇನ್, ಮೊಬೈಲ್ ವಶಪಡಿಸಿಕೊಂಡು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದ್ದಾರೆ.

       ಪುಟ್ಟೇನಹಳ್ಳಿಯ 18ನೇ ಕ್ರಾಸ್‍ನ ರಸ್ತೆಯಲ್ಲಿ ಆರೋಪಿಯು ಕೊಕೇನ್ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಯನ್ನು ಬಂಧಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here