ರೈತರನ್ನು ಉದಾಸೀನ ಮಾಡಿದ ರಾಜ್ಯ ಸರ್ಕಾರ : ಬಿ ಎಸ್ ವೈ

ಬೆಂಗಳೂರು

      ರಾಜ್ಯದ ರೈತರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಉದಾಸೀನ ಭಾವನೆಯಿಂದ ವರ್ತಿಸುತ್ತಿದೆ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

      ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರೈತರ ಸಾಲ ಮನ್ನಾ ಮಾಡದೆ, ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ರೈತರನ್ನು ಮತ್ತೆ, ಮತ್ತೆ ಸಂಕಷ್ಟಕ್ಕೆ ನೂಕುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

       ಸರ್ಕಾರ ಅಧಿಕಾರ ವಹಿಸಿಕೊಂಡು ಆರು ತಿಂಗಳ ಕಳೆಯುತ್ತಾ ಬಂದರೂ ಸಾಲ ಮನ್ನಾಗೊಂದಲ ಪರಿಹಾರ ಮಾಡಿಲ್ಲ , ಈ ಅವಧಿಯಲ್ಲಿ 200 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರು ಆರೋಪಿಸಿದರು.

       ರಾಜ್ಯದ 15 ಜಿಲ್ಲೆಗಳಲ್ಲಿ ಭೀಕರ ಬರಗಾಲವಿದೆ ಆದರೂ ಸರ್ಕಾರ ರೈತರ ಸಮಸ್ಯೆ ನಿವಾರಣೆ ಮಾಡುವ ಯಾವುದೆ ನೈಜ ಕಾಳಜಿಯನ್ನು ತೋರುತ್ತಿಲ್ಲ, ಕೂಡಲೇ ರೈತರ ಮೇಲೆ ಹಾಕಿದ ಮೊಕದ್ದಮೆಗಳನ್ನು ವಾಪಸ್ ತೆಗೆದುಕೊಳ್ಳಬೇಕು, ಕಬ್ಬಿಗೆ ನ್ಯಾಯೋಚಿತ ಬೆಲೆÉ ಕೊಡಿಸಬೇಕು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಭತ್ತ ಖರೀದಿ ಕೇಂದ್ರವನ್ನು ಕೂಡಲೇ ಆರಂಭಿಸಬೇಕು ಇಲ್ಲವಾದಲ್ಲಿ ಬಿಜೆಪಿ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ದ ಉಗ್ರ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಯಡಿಯೂರಪ್ಪ ಎಚ್ಚರಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link
Powered by Social Snap