ಸರ್ದಾರ್ ಪಟೇಲ್ ಜನ್ಮದಿನದ ಪ್ರಯುಕ್ತ ಏಕತಾ ಓಟ

0
15

ದಾವಣಗೆರೆ :

        ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನೋತ್ಸವದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಬುಧವಾರ ನಗರದಲ್ಲಿ ಜಿಲ್ಲಾಡಳಿತದಿಂದ ಏಕತಾ ಓಟ ನಡೆಸಲಾಯಿತು.

       ನಗರದ ಪ್ರೌಢಶಾಲಾ ಮೈದಾನದಿಂದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಂದ ಚಾಲನೆ ಪಡೆದ ಏಕತೆಗಾಗಿ ಓಟವು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾ ಕ್ರೀಡಾಂಗಣ ತಲುಪಿ ಮುಕ್ತಾಯವಾಯಿತು.

        ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆಯನ್ನು ಕಾಪಾಡಿಕೊಳ್ಳಲು ನಾನು ನನ್ನನ್ನು ಅರ್ಪಿಸಿದ್ದೇನೆ ಮತ್ತು ನನ್ನ ಸಹವರ್ತಿ ದೇಶಿಯರಲ್ಲಿ ಈ ಸಂದೇಶವನ್ನು ಹರಡಲು ಶ್ರಮಿಸುತ್ತೇನೆ ಎಂದು ನಾನು ಖಂಡಿತವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಬಾಯಿ ಪಟೇಲರ ದೃಷ್ಟಿ ಮತ್ತು ಕಾರ್ಯದಿಂದ ಸಾಧ್ಯವಾದ ನನ್ನ ದೇಶದ ಏಕೀಕರಣದ ಉತ್ಸಾಹದಲ್ಲಿ ನಾನು ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇನೆ. ನನ್ನ ದೇಶದ ಆಂತರಿಕ ಭದ್ರತೆಗಾಗಿ ನನ್ನ ಸ್ವಂತ ಕೊಡುಗೆಯನ್ನು ನೀಡಲು ನಾನು ಖಂಡಿತವಾಗಿಯೂ ನಿರ್ಧರಿಸುತ್ತೇನೆಂದು ಪ್ರತಿಜ್ಞಾ ವಿಧಿ ಬೋಧಿಸಿದರು.

       ಏಕತಾ ಓಟದಲ್ಲಿ ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್, ಡಿಡಿಪಿಐ ಪರಮೇಶ್ವರಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇವಣ್ಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮನ್ಸೂರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದೇವೇಂದ್ರಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಕೊಟ್ರೇಶ್ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

LEAVE A REPLY

Please enter your comment!
Please enter your name here