ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

ಚಿತ್ರದುರ್ಗ:

      ನಗರ ಹಾಗೂ ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲೆಂದು ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸೈಕಲ್‍ಗಳನ್ನು ವಿತರಿಸಿರುವುದು ಅತ್ಯುತ್ತಮ ಕಾರ್ಯಕ್ರಮ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮೆಚ್ಚುಗೆ ವ್ಯಕ್ತಪಡಿಸಿದರು.

      ಭೋವಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ಮಕ್ಕಳಿಗೆ ಬೈಸಿಕಲ್‍ಗಳನ್ನು ವಿತರಿಸಿ ಮಾತನಾಡಿದ ಶಾಸಕರು ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳಿಗೆ ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ಪೌಷ್ಟಿಕಾಂಶವುಳ್ಳ ಹಾಲು ನೀಡುತ್ತಿರುವುದು ಮಹತ್ವದ ಯೋಜನೆ.

        ಬೈಸಿಕಲ್ ಹಳ್ಳಿಗಾಡಿನ ಮಕ್ಕಳಿಗೆ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಶಾಲೆಗೆ ಹೋಗಲು ನೆರವಾಗುತ್ತಿದೆ. ನರೇಂದ್ರಮೋದಿ ದೇಶದ ಪ್ರಧಾನಿಯಾದ ಮೇಲೆ ಎಲ್ಲಾ ಶಾಲೆಗಳಲ್ಲಿಯೂ ಕಡ್ಡಾಯವಾಗಿ ಶೌಚಾಲಯವಿರಬೇಕೆಂದು ಸೂಚಿಸಿದ್ದಾರೆ. ನಮ್ಮ ದೇಶದ ಮಕ್ಕಳಿಗೆ ಸರಿಯಾದ ಪ್ರೋತ್ಸಾಹ ಸಿಕ್ಕರೆ ಬೇರೆ ರಾಷ್ಟ್ರಗಳ ಮಕ್ಕಳನ್ನು ಮೀರಿಸುವಷ್ಟು ಸಮರ್ಥರಿದ್ದಾರೆ ಎನ್ನುವುದರಲ್ಲಿ ಅನುಮಾನವಿಲ್ಲ. ಒಂದು ಕಾಲದಲ್ಲಿ ಕೆಲವೇ ಕೆಲವು ಜಾತಿಯ ಮಕ್ಕಳು ಮಾತ್ರ ಐ.ಎ.ಎಸ್., ಐ.ಪಿ.ಎಸ್.ನಲ್ಲಿ ಪಾಸ್ ಆಗುತ್ತಿದ್ದರು. ಈಗ ಎಲ್ಲಾ ವರ್ಗದ ಮಕ್ಕಳು ಉನ್ನತ ಶಿಕ್ಷಣ ಪಡೆಯುವಂತ ಅನುಕೂಲವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಕಲ್ಪಿಸಿದೆ. ಇದನ್ನು ಬಳಸಿಕೊಂಡು ಎಲ್ಲರೂ ಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.

       ಭೋವಿಗುರುಪೀಠದ ಇಮ್ಮಡಿಸಿದ್ದರಾಮೇಶ್ವರಸ್ವಾಮಿ, ಭೋವಿ ಸಮಾಜದ ಮುಖಂಡರುಗಳಾದ ಆನಂದಪ್ಪ, ತಿಮ್ಮಣ್ಣ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಲಕ್ಷ್ಮಣ್ ಇನ್ನು ಮುಂತಾದವರು ವೇದಿಕೆಯಲ್ಲಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap