ಕೇಂದ್ರ ಸರ್ಕಾರ ಕಾರ್ಮಿಕ ನೀತಿಯನ್ನು ಅಂಗನವಾಡಿ ಕಾರ್ಯರ್ತೆಯರು ಮೆರವಣಿಗೆ ನಡೆಸಿ ಪ್ರತಿಭಟಿಸಿದರು.

ಹೊಳಲ್ಕೆರೆ
 
       ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುಧ್ದ ದೇಶ ವ್ಯಾಪಿ ಸಾರ್ವತ್ರಿಕ ಮುಷ್ಕರವನ್ನು ಹಮ್ಮಿಕೊಳ್ಳುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಎ.ಐಟಿ.ಯುಸಿ ಫೆಡರೇಷನ್ ರಾಜ್ಯ ಸಮಿತಿಯ ಸಭೆಯ ತೀರ್ಮಾನದಂತೆ ತಾಲ್ಲುಕು ಅಂಗನವಾಡಿ ಕಾರ್ಯಕರ್ತೆಯರು ಮುಖ್ಯ ಬೀದಿಯಲ್ಲಿ ಪ್ರತಿಭಟಿಸಿ ಕೊನೆಗೆ ತಹಶೀಲ್ದಾರ್‍ರವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
          ಅನೇಕ ವರ್ಷಗಳಿಂದ ಸುಮಾರು 12 ಬೇಡಿಕೆಗಳನ್ನು ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕರ ವಿರೋಧಿ ನೀತಿಯನ್ನು 8 ಮತ್ತು 9 ಎರಡು ದಿನ ಮೆರವಣಿಗೆ ಮೂಲಕ ಪ್ರತಿಭಟನೆ ಮತ್ತು ಧರಣಿ ನಡೆಸಲಾಗುವುದು ಹಾಗೂ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷೆ ಡಿ.ಮಹೇಶ್ವರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
 
          ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ, ವಿದ್ಯಾರ್ಥಿ ಮತ್ತು ಯುವ ಜನತೆಯ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತೆಯರು ಪ್ರತಿಭಟಿಸಿದರು.
 
         ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಟಿ.ಗಂಗಮ್ಮ, ಉಪಾಧ್ಯಕ್ಷರುಗಳಾದ ಅಮೀನಾಬಿ ಮತ್ತು ಎಂ.ಶಾಂತಕುಮಾರಿ, ತಾಲ್ಲೂಕು ಸಂಚಾಲಕಿ ಟಿ.ಚಂದ್ರಮತಿ, ಸಹಕಾರ್ಯದರ್ಶಿಗಳಾದ ಜಿ.ಟಿ.ಸುಮಿತ್ರಮ್ಮ ಮತ್ತು ವೈ.ಶಾರದಮ್ಮ ಮುಂತಾದವರು ಭಾಗವಹಿಸಿದ್ದರು.

 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap