ಗಾಂಧಿ ಆಶ್ರಮದಲ್ಲಿ ಸೋನಿಯಾ ಅಂಡ್ ಟೀಮ್..!!

ಗಾಂಧಿನಗರ:
            ಗುಜರಾತ್ ನಿಂದಲೇ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಆರಂಭಿಸುವ ಮೂಲಕ ಬಿಜೆಪಿಗೆ ತಿರುಗೇಟು ನೀಡಲು ಕೈನಾಯಕರು ಸಿದ್ದತೆ ನಡೆಸಿದ್ದಾರೆ , ಗಾಂಧೀಜಿಯವರ ಅವರ ಅಂತಿಮ ದಿನಗಳಲ್ಲಿ ಅವರು ಕಾಲ ಕಳೆದಿದ್ದ ಗುಜರಾತ್ ನ ಸಾಬರಮತಿ ಅಶ್ರಮದಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಆರಂಭವಾಗಿದ್ದು ಇಲ್ಲಿಂದಲೇ ಪ್ರಚಾರ ಆರಂಭಿಸುವ ಸೂಚನೆ ನೀಡಿದೆ.
          ಕಾರ್ಯಕಾರಿಣಿಯಲ್ಲಿ  ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಮುಖಂಡರಾದ ಎ.ಕೆ.ಆಂಟನಿ, ಗುಲಾಮ್‌ ನಬಿ ಆಜಾದ್‌, ಅಹ್ಮದ್‌ ಪಟೇಲ್‌, ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೊಟ್‌, ಛತ್ತೀಸ್‌ಗಢ ಸಿಎಂ ಭೂಪೇಶ್‌ ಬಘೇಲ್‌, ಪುದುಚೆರಿ ಸಿಎಂ ವಿ.ನಾರಾಯಣಸಾಮಿ, ತರುಣ್‌ ಗೊಗೊಯಿ, ಹರೀಶ್ ರಾವತ್‌ ಸೇರಿದಂತೆ ಹಲವು ಮುಖಂಡರು ಸಾಬರಮತಿ ಆಶ್ರಮದ ಪ್ರಾರ್ಥನಾ ಸಭೆಯಲ್ಲಿ ಭಾಗಿಯಾದರು. 
            ಪ್ರಿಯಾಂಕಾ ವಾದ್ರಾ ಇಡೀ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದು, ಇಂದು ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಿಯಾಂಕಾ ವಾದ್ರಾ ತಮ್ಮ ಮೊದಲ ಭಾಷಣ ಮಾಡಲಿದ್ದಾರೆ.  ಕಾರ್ಯಕಾರಿ ಸಮಿತಿ ಸಭೆ ಬಳಿಕ ಗಾಂಧಿನಗರದಲ್ಲಿ ನಡೆಯಲಿರುವ ಕಾಂಗ್ರೆಸ್ ರ್ಯಾಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಿಯಾಂಕಾ ವಾದ್ರಾ ಭಾಷಣ ಮಾಡಲಿದ್ದಾರೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap