ಕಾಂಗ್ರೇಸ್ ರಾಜ್ಯಾಧ್ಯಕ್ಷರ ರಾಜಿನಾಮೆ

0
46
ನವದೆಹಲಿ: 
       ದೇಶದ ರಾಜಕಾರಣಿಗಳ ನಿದ್ದೆ ಕೆಡಿಸಿರುವಂತಹ ಲೋಕಸಭಾ ಚುನಾವಣೆಗೆ ದಿನಗಣನೆ ಶುರುವಾಗಿರುವ ಬೆನ್ನಲೇ ಕಾಂಗ್ರೆಸ್ ಗೆ ದೊಡ್ಡ ಆಘಾತವಾಗಿದೆ. 
       ದೇಶದಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಳ್ಳುತ್ತಿರುವ ಕಾಲಘಟ್ಟದಲ್ಲಿ , ರಾಜಧಾನಿಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಮುಖಂಡ ಅಜಯ್ ಮಕೇನ್ ರಾಜಿನಾಮೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
       ನಿನ್ನೆ ತಡರಾತ್ರಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಿವಾಸಕ್ಕೆ ತೆರಳಿದ್ದ ಅಜಯ್ ಮಕೇನ್ ಅವರು ಅಧಿಕೃತವಾಗಿ ತಮ್ಮ ರಾಜಿನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.ಕಾಂಗ್ರೇಸ್ ಕೂಡ ಮಕೇನ್ ಅವರ ರಾಜಿನಾಮೆಯನ್ನು ಅಂಗೀಕರಿಸಿದ್ದು ಮುಂದಿನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ  ದೊರೆತಿದೆ ಎಂದು ತಿಳಿದು ಬಂದಿದೆ . ತಮಗೆ ಆರೋಗ್ಯ ಸರಿಯಿಲ್ಲದ ಕಾರಣ ರಾಜಿನಾಮೆ ನೀಡಿರುವುದಾಗಿ ತಿಳಿಸಿದ್ದಾರೆ .
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here