ರಾಜ್ಯಪಾಲರ ಬದಲಾವಣೆಗೆ ದೋವಲ್ ಸಲಹೆ…!!!

ಶ್ರೀನಗರ

    ಕಣಿವೆ ರಾಜ್ಯವಾದ ಕಾಶ್ಮೀರದಲ್ಲಿ ಸದ್ಯ ರಾಷ್ಟ್ರಪತಿ ಆಳ್ವಿಕೆ ಜಾರಿಯಲ್ಲಿದೆ. ಆದರೆ ಕೇಂದ್ರ ಸರ್ಕಾರವು ಅಲ್ಲಿನ ರಾಜ್ಯಪಾಲರನ್ನು  ಬದಲಿಸಲು ಚಿಂತನೆ ನಡೆಸಿದೆ ಎಂಬ ವಿಷಯ ಹರಿದಾಡುತ್ತಿದೆ. 

    ಪುಲ್ವಾಮಾ ದಾಳಿಯ ಮಾರನೆ ದಿನ ನಡೆದ ಕ್ಯಾಬಿನೆಟ್ ಕಮಿಟಿ ಆಫ್ ಸೆಕ್ಯುರಿಟಿ ಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್ ಅವರು ಮಿಲಿಟರಿ ಹಿನ್ನೆಲೆ ಇರುವ ವ್ಯಕ್ತಿಯನ್ನು ರಾಜ್ಯಪಾಲರನ್ನಾಗಿ ಕಳುಹಿಸುವ ಬಗ್ಗೆ ಸಲಹೆ ನೀಡಿದ್ದರು, ಪ್ರಧಾನಿಯವರಿಗೂ ಈ ವಿಷಯವನ್ನು ಮನವರಿಕೆ ಮಾಡಿಕೊಡಲಾಗಿದೆ ಎಂದು ತಿಳಿದು ಬಂದಿದೆ.

    ಬ್ಲಾಸ್ಟ್ ನಡೆದ ಕೆಲವೇ ಗಂಟೆಗಳಲ್ಲಿ ಕಾಶ್ಮೀರದ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್ ಅವರು ಈ ದಾಳಿ ಬೇಹುಗಾರಿಕಾ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಹೇಳಿದ್ದು ಸಹಜವಾಗಿ ದೋವಲ್‌ರನ್ನು ಕೆರಳಿಸಿತ್ತು. ಆದರೆ ಯಾರನ್ನು ರಾಜ್ಯ ಪಾಲರನ್ನಾಗಿ ಕಳಿಸಬೇಕು ಎಂಬ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ.

     ಈ ಹಿಂದೆ ಅಂದರೆ 1989 ರಲ್ಲಿ ಜಗಮೋಹನ್ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ  ಉಗ್ರರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದು ಅಲ್ಲಿನ ಪ್ರತ್ಯೇಕ ತಾವಾದಿಗಳ ಜೊತೆಗೆ ರಾಜಕೀಯ ಪಕ್ಷಗಳನ್ನೂ ಕೆರಳಿಸಿತ್ತು. ಈಗ ಮಿಲಿಟರಿ ಹಿನ್ನೆಲೆಯ ವ್ಯಕ್ತಿಯನ್ನೇ ರಾಜ್ಯಪಾಲರನ್ನಾಗಿ ನೇಮಿಸಿದರೆ ಏನು ಪ್ರತಿಕ್ರಿಯೆ ಬರಬಹುದು ಎಂದು ಬಿಡಿಸಿ ಹೇಳಬೇಕಿಲ್ಲ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap