ನವದೆಹಲಿ:
ಚುನಾವಣೆ ಹತ್ತಿರ ಬರುತ್ತಿದ್ದಂತೆ ಪಕ್ಷಗಳಲ್ಲಿ ಪಕ್ಷಾಂತರ ಜೋರಾಗಿ ನಡೆಯುತ್ತಿದೆ ಇದರ ಒಂದು ಭಾಗವಾಗಿ ಬಿಜೆಪಿ ಹಿರಿಯ ನಾಯಕ ಸಚಿವ ಜಸ್ವಂತ್ ಸಿಂಗ್ ಅವರ ಪುತ್ರ, ರಾಜಸ್ಥಾನದ ಬಿಜೆಪಿ ಶಾಸಕ ಮನ್ವೇಂದರ್ ಸಿಂಗ್ ಅವರು ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಹಾರಿದ್ದಾರೆ.
ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಮನ್ವೇಂದರ್ ಸಿಂಗ್ ಅವರು ಬಿಜೆಪಿ ಪಕ್ಷ ತೊರೆಯುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ರಾಜಸ್ಥಾನ ಕಾಂಗ್ರೆಸ್ ಮುಖ್ಯಸ್ಥ ಸಚಿನ್ ಪೈಲಟ್ ಅವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ