ಲೋಕಸಭಾ ಉಪ-ಚುನಾವಣೆ ವಿರೋಧಿಸಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು:

       ಕೇಂದ್ರ ಚುನಾವಣಾ ಆಯೋಗವು ರಾಜ್ಯದ 3 ಲೋಕಸಭಾ ಕ್ಷೇತ್ರಗಳಾದ ಮಂಡ್ಯ, ಬಳ್ಳಾರಿ, ಶಿವಮೊಗ್ಗ ಕ್ಷೇತ್ರಗಳಿಗೆ ನಡೆಯುತ್ತಿರುವ ಲೋಕಸಭೆ ಉಪಚುನಾವಣೆಯನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

      ತುಮಕೂರಿನ ರಮೇಶ್ ನಾಯಕ್‌ ಎಂಬುವರು ಇಂದು ಹೈಕೋರ್ಟ್‌ಗೆ ಪಿಐಎಲ್‌ (ಸಾರ್ವಜನಿಕ ಹಿತಾಸಕ್ತಿ ಅರ್ಜಿ) ಸಲ್ಲಿಸಿದ್ದು ವಿಚಾರಣೆ ನಡೆಯಲಿದೆ.  

ಅರ್ಜಿದಾರರ ದೂರು:

       ಲೋಕಸಭೆ ಮುಖ್ಯ ಚುನಾವಣೆಗೆ ಇನ್ನು ಆರು ತಿಂಗಳು ಸಹ ಇಲ್ಲದೇ ಇರುವ ಸಮಯದಲ್ಲಿ ಲೋಕಸಭೆ ಉಪಚುನಾವಣೆಯಲ್ಲಿ ನಡೆಸಲಾಗುತ್ತದೆ. ಚುನಾವಣೆಯಲ್ಲಿ ಆಯ್ಕೆ ಆದ ಅಭ್ಯರ್ಥಿಗಳಿಗೆ ಆರು ತಿಂಗಳು ಸಹ ಕಾಲಾವಕಾಶ ಇರುವುದಿಲ್ಲ. ಏಪ್ರಿಲ್‌ ಅಷ್ಟರಲ್ಲಿ ಸಾರ್ವತ್ರಿಕ ಚುನಾವಣೆ ಘೋಷಣೆ ಆಗುತ್ತದೆ ಹಾಗಾಗಿ ಈ ಚುನಾವಣೆ ಕೇವಲ ಸಾರ್ವಜನಿಕ ಹಣದ ಪೋಲಷ್ಟೆ ಎಂದು ಅರ್ಜಿದಾರರು ಹೇಳಿದ್ದಾರೆ. 

      ನವೆಂಬರ್ 3ರಂದು ಮಂಡ್ಯ, ಶಿವಮೊಗ್ಗ, ಬಳ್ಳಾರಿ ಕ್ಷೇತ್ರಗಳ ಲೋಕಸಭೆ ಉಪಚುನಾವಣೆ ನಡೆಯಲಿದೆ. ಇದೇ ದಿನ ರಾಮನಗರ ಮತ್ತು ಜಮಖಂಡಿ ಕ್ಷೇತ್ರಗಳ ವಿಧಾನಸಭೆ ಉಪಚುನಾವಣೆ ಸಹ ನಡೆಯಲಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap