ಬೆಂಗಳೂರು
ಈ ಮಾಸಾಂತ್ಯದ ವೇಳೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ಮಂತ್ರಿಮಂಡಲ ವಿಸ್ತರಣೆ ವಿಳಂಬವಾಗಲಿದೆ ಎನ್ನುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದು, ಅವರು ವಾಪಸ್ ಬಂದ ನಂತರ ಚರ್ಚೆ ಮಾಡಿ ದಿನಾಂಕ ನಿಗದಿ ಮಾಡಲಾಗುವುದು ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ