ನಂಜನಗೂಡಿನಲ್ಲಿ ಅಪಘಾತ : ಮೂವರ ಸಾವು

0
13

ಮೈಸೂರು: 

           ನಂಜನಗೂಡು-ತಿ.ನರಸೀಪುರ ರಸ್ತೆಯಲ್ಲಿ ಲಾರಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ  ಮೂವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ .

          ಬೈಕ್​ ಸವಾರರು ತಿ.ನರಸೀಪುರದ ಕಡೆ ಹೊಗುತ್ತಿದ್ದಾಗ ಮುಂದಿನ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ ಮೂವರು  ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ಪೊಲೀಸರು ತಿಳಿಸಿದ್ದಾರಲ್ಲದೇ. ಬೈಕ್ ನಲ್ಲಿ ಹೋಗುತ್ತಿದ್ದವರನ್ನು ಚಂದ್ರ, ಬಸವ ಹಾಗೂ ಪ್ರಭುಸ್ವಾಮಿ ಅವರು ನಂಜಗೂಡಿನ ನಿವಾಸಿಗಳಾಗಿದ್ದರು ಯಾವುದೋ ಕಾರ್ಯ ನಿಮ್ಮಿತ್ತ ಬೇರೆ ಊರಿಗೆ ಹೊಗುತ್ತಿದ್ದರು ಎಂದು ತಿಳಿಸಿದ್ದಾರೆ ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕೆ ಬಂದ ಬಿಳಿಗೆರೆ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಸ್ಥಳೀಯ ಮರಣೋತ್ತರ ಪರೀಕ್ಷೆಗಾಗಿ ಸ್ಥಳಿಯ ಆಸ್ಪತ್ರೆಗೆ ಕಳುಹಿಸಲಾಗಿದೆ ಮತ್ತು ಮುಂದಿನ ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ .

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here