ಮಾರಮ್ಮನ ಪ್ರಸಾದ ಸೇವಿಸಿದ 18 ಮಂದಿ ಭಕ್ತರ ದುರ್ಮರಣ!!!

ಚಾಮರಾಜನಗರ:

      ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿದ ಬಳಿಕ 18 ಜನ ಮೃತಪಟ್ಟಿದ್ದು 80ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

      ದೇಗುಲದ ಗೋಪುರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಿಗೆ ಭಕ್ತದಿಂದ ರೈಸ್​ಬಾತ್​ ತಯಾರಿಸಲಾಗಿತ್ತು. ಪ್ರಸಾದ ಸೇವಿಸಿದ 40ಕ್ಕೂ ಅಧಿಕ ಭಕ್ತರ ಪೈಕಿ 18 ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. 

      ಇದೀಗ ಈ ಘಟನೆಯಲ್ಲಿ ಮೃತರ ಸಂಖ್ಯೆ 18 ಕ್ಕೆ ಏರಿದ್ದು, 80ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಇನ್ನು ದೇವಸ್ಥಾನದ ಆವರಣದಲ್ಲಿ ಹಾಕಿದ್ದ ವಿಷಯುಕ್ತ ಆಹಾರ ಸೇವಿಸಿದ್ದ 60ಕ್ಕೂ ಹೆಚ್ಚು ಕಾಗೆಗಳು ಹಾಗೂ ಗೊರವಂಕಗಳು ವಿಲವಿಲ ಒದ್ದಾಡಿ ಪ್ರಾಣಬಿಟ್ಟಿದ್ದಾವೆ. ಅಸ್ವಸ್ಥರ ಗುಣಲಕ್ಷಣಗಳನ್ನು ನೋಡಿದರೇ, ಆಹಾರದಲ್ಲಿ ಕೀಟನಾಶಕ ಬೆರೆತಿರುವ ಸಂಶಯವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ.

      ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ ಹನೂರಿನ ಶಾಸಕ ನಾಗೇಂದ್ರ ಅವರು, ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ, ಅನ್ನ ಪ್ರಸಾದದ ಸ್ಯಾಂಪಲ್ ಪಡೆದು ಲ್ಯಾಬ್ ಗೆ ಕಳಿಸಲಾಗುತ್ತಿದೆ. ಮೃತಪಟ್ಟವರ ಕುಟುಂಬಕ್ಕೆ ನನ್ನ ಸಾಂತ್ವನವನ್ನು ತಿಳಿಸುತ್ತಿದ್ದೇನೆ. ಸದ್ಯ ಬೆಳಗಾವಿಯಲ್ಲಿ ಅಧಿವೇಶನದಲ್ಲಿ ಪಾಲ್ಗೊಂಡಿದ್ದೇನೆ. ಆದಷ್ಟು ಬೇಗ ಹನೂರಿಗೆ ತೆರಳುತ್ತೇನೆ ಎಂದು ತಿಳಿಸಿದ್ದಾರೆ. 

      ಈ ಘಟನೆಗೆ ಸಂಬಂಧಿಸಿದಂತೆ ಪ್ರಸಾದ ತಯಾರಿಸಿದ ಮೂವರು ಬಾಣಸಿಗರನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಿಎಂ ಹೆಚ್.ಡಿ ಕುಮಾರ ಸ್ವಾಮಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಭೇಟಿ ನೀಡಿ ಯೋಗ ಕ್ಷೇಮ ವಿಚಾರಿಸಿ ಘಟನೆ ಯಲ್ಲಿ ಮೃತಪಟ್ಟ ಹಾಗೂ ಚಿಕಿತ್ಸೆ ಪಡೆಯುತ್ತಿರುವವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದ್ದಾರೆ. ಹಾಗೂ ಸಾವನಪ್ಪಿರುವವರಿಗೆ 5 ಲಕ್ಷ ಪರಿಹಾರವನ್ನು ನೀಡಲಾಗುವುದು ಅಂಥ ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

 

 

Recent Articles

spot_img

Related Stories

Share via
Copy link
Powered by Social Snap