ಸಚಿವ ಪುಟ್ಟರಂಗಶೆಟ್ಟಿಗೆ ಎಸಿಬಿ ನೋಟಿಸ್!!

0
31

 ಬೆಂಗಳೂರು:

      ವಿಧಾನ ಸೌಧದಲ್ಲಿ ದಾಖಲೆ ಇಲ್ಲದ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಪುಟ್ಟರಂಗ ಶೆಟ್ಟಿ ಅವರಿಗೆ ಎಸಿಬಿ ನೋಟಿಸ್ ಜಾರಿಗೊಳಿಸಿದೆ

      ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ಅವರ ಕಚೇರಿಯ ಟೈಪಿಸ್ಟ್ ಮೋಹನ್, ದಾಖಲೆ ಇಲ್ಲದ 25.76 ಲಕ್ಷ ರೂಪಾಯಿ ಹಣ ಸಾಗಿಸುತ್ತಿದ್ದ ವೇಳೆಯಲ್ಲಿ ವಿಧಾನಸೌಧದ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದ. ಈ ಪ್ರಕರಣ ರಾಜಕೀಯವಾಗಿ ಭಾರೀ ಜಟಾಪಟಿಗೆ ಕಾರಣವಾಗಿತ್ತು

      ಈ ಪ್ರಕರಣದಕ್ಕೆ ಸಂಬಂಧಿಸಿದಂತೆ, ಸಚಿವರ ಕಚೇರಿಯ ಟೈಪಿಸ್ಟ್ ಮೋಹನ್ ಎಂಬವರನ್ನು ಈಗಾಗಲೇ ಎಸಿಬಿ ವಿಚಾರಣೆ ನಡೆಸಿದೆ. ಮಾಜಿ ಪಿಎಗಳಾದ ಕೃಷ್ಣ ಮೂರ್ತಿ ಮತ್ತು ಮಂಜುನಾಥ್ ಅವರನ್ನು ವಿಚಾರಣೆ ನಡೆಸಲಾಗಿದೆ.

     ಈಗ 3 ದಿನಗಳ ಒಳಗಾಗಿ ಹಾಜರಾಗಿ ವಿವರಣೆ ನೀಡುವಂತೆ ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಎಸ್ ಪಿ ಸಂಜೀವ್ ಪಾಟೀಲ್ ನೋಟಿಸ್ ಜಾರಿ ಮಾಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

LEAVE A REPLY

Please enter your comment!
Please enter your name here