ಭಾರತ್ ಬಂದ್ : ಪ್ರತಿಭಟನಾ ನಿರತ ಮಹಿಳೆ ಸಾವು!!!

0
57

ಕಾರವಾರ:

       ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಇಂದು (ಮಂಗಳವಾರ) ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆ ಮೆರವಣಿಗೆ ವೇಳೆ ಅಂಗನವಾಡಿ ಸಹಾಯಕ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ.

      ಮೃತ ಮಹಿಳೆಯನ್ನು ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಅಂಗನವಾಡಿಯ ಸಹಾಯಕಿ ಶಾಂತವ್ವ ಚಕ್ರಸಾಲಿ (57) ಎಂದು ಗುರುತಿಸಲಾಗಿದೆ.

       ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ತಾಲೂಕು ಪಂಚಾಯತಿ ಎದುರು ಮಂಗಳವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಶಾಂತವ್ವ ಏಕಾಏಕಿ ಕುಸಿದು ಬಿದ್ದಿದ್ದಾರೆ.

      ಕೂಡಲೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

LEAVE A REPLY

Please enter your comment!
Please enter your name here